ಚಿತ್ರದುರ್ಗ .09 : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮದಲ್ಲಿನ ಸ್ವಾತಂತ್ರ್ಯ ಹೋರಾಟಗಾರರಾದ ಭೀಮಪ್ಪ ಅವರಿಗೆ ಶುಕ್ರವಾರ ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವ ಸಮರ್ಪಿಸಲಾಯಿತು.
ಇದೇ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸನ್ಮಾನಿಸಬೇಕು ಎಂಬುದಾಗಿ ಸರ್ಕಾರದ ನಿರ್ದೇಶನದಂತೆ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮಕ್ಕೆ ತೆರಳಿ ಸ್ವಾತಂತ್ರ್ಯ ಹೋರಾಟಗಾರರಾದ ಭೀಮಪ್ಪ ಬಿನ್ ವೆಂಕಟಪ್ಪ ಅವರಿಗೆ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ಸೇರಿದಂತೆ ಮತ್ತಿತರರು ಇದ್ದರು.