ಬೆಂಗಳೂರು ಗ್ರಾಮಾಂತರ ಜಿಲ್ಲೆ : 2024 ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ರವರು ಆಗಸ್ಟ್. 11(ಭಾನುವಾರ)ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಜಿಲ್ಲೆಗೆ ಆಗಸ್ಟ್. 11 ರಂದು ಬೆಳಿಗ್ಗೆ 10.00 ಗಂಟೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ರವರು ದೊಡ್ಡಬಳ್ಳಾಪುರ ಟೌನ್ ನ ಡಾ. ಬಿ.ಆರ್ ಅಂಬೇಡ್ಕರ್ ರಸ್ತೆಯ ಕನ್ನಡ ಜಾಗೃತಿ ಭವನದಲ್ಲಿ ಡಾ. ಡಿ.ಆರ್ ನಾಗರಾಜ್ ಬಳಗ ದೊಡ್ಡಬಳ್ಳಾಪುರ ಮತ್ತು ಬಿಗ್ ಕನ್ನಡ ವೆಂಕಟಾಲದಲ್ಲಿ ಮತ್ತೆ ಭಾಗವಹಿಸಿದ ಹೇಮಂತ್ಲಿಂಗಪ್ಪ ಅವರ ‘ಮತ್ತೆ ಮಳೆ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.