Breaking
Tue. Dec 24th, 2024

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ: ಅರ್ಜಿ ಆಹ್ವಾನ

ಚಿತ್ರದುರ್ಗ  : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳಿಗೆ ಸೇರಿದ ಕಾಡುಗೊಲ್ಲ ಜನಾಂಗದ ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಹಾಯಧನ, ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಸೇವಾಸಿಂಧು ಫೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮದಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಉದ್ಯೋಗ ನೇರ ಸಾಲ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ (ಈ ಯೋಜನೆಯಲ್ಲಿ ಒಂದೇ ಸ್ಥಳದಲ್ಲಿ ಕನಿಷ್ಠ 2 ಗರಿಷ್ಠ 5 ಜಮೀನು ಹೊಂದಿರಬೇಕು), ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್ ಯೋಜನೆಯೊಂದಿಗೆ), ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ (ವಾರ್ಷಿಕ ವರಮಾನ ರೂ.8 ಲಕ್ಷ ಮಿತಿಯೊಳಗಿರಬೇಕು).

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಿಗೆ. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಸರ್ಕಾರದ ಆದೇಶದನ್ವಯವು ಜಾತಿಗೆ ಸೇರಿದವರಿಗಾಗಿ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು. 18-55 ವರ್ಷಗಳ ವಯೋಮಿತಿ ಹೊಂದಿರಬೇಕು. ನಿಗಮ / ಸರ್ಕಾರದ ಯಾವುದಾದರೂ ಯೋಜನೆಗಳಲ್ಲಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗಿದೆ.

ಅರಿವು ಯೋಜನೆಡಿ 18-30 ವರ್ಷ ವಯೋಮಿತಿಯೊಂದಿಗೆ, ವಾರ್ಷಿಕ ವರಮಾನ 3.50 ಲಕ್ಷ ಹೊಂದಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರನು 21 ರಿಂದ 45 ವರ್ಷ ವಯೋಮಿತಿ ಹೊಂದಿರಬೇಕು. ಅರ್ಜಿದಾರನ ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದ ರೂ.98,000/ ಮತ್ತು ನಗರ ಪ್ರದೇಶದವರಿಗೆ ರೂ.1,20,000/ ಮೀರಿರಬಾರದು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5, ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ನಷ್ಟು ಮೀಸಲಾತಿ ಇದೆ.

ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 080-22374848, 7899899039 ಹಾಗೂ ಜಿಲ್ಲೆಗಳಲ್ಲಿ ಡಿ.ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಸಂಪರ್ಕಿಸಬಹುದು ಎಂದು ಹೆಚ್ಚಿನ ಜಿಲ್ಲಾ ವ್ಯವಸ್ಥಾಪಕರು ಹೆಚ್. ಶಿಲ್ಪಾ.

Related Post

Leave a Reply

Your email address will not be published. Required fields are marked *