Breaking
Wed. Dec 25th, 2024

ಬೆಂಗಳೂರಿನ ಪಿ.ಜಿ.ಗಳಿಗೆ ಮಾರ್ಗಸೂಚಿ ಪ್ರಕಟ 6 ತಿಂಗಳಿಗೊಮ್ಮೆ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ…!

ಬೆಂಗಳೂರು ನಗರ ಪೇಯಿಂಗ್ ಗೆಸ್ಟ್ (ಪಿ.ಜಿ) ಉದ್ಯಮಕ್ಕೆ ಪರವಾನಗಿ ನೀಡುವ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ವಲಯ ಆರೋಗ್ಯಾಧಿಕಾರಿ, ಆರೋಗ್ಯ ವೈದ್ಯಾಧಿಕಾರಿ ಮತ್ತು ಹಿರಿಯ ಆರೋಗ್ಯ ಪರಿವೀಕ್ಷಕರಿಗೆ ತಮ್ಮ ಕಾರ್ಯಕ್ಷೇತ್ರದ ನೇಮಕಾತಿ ಪಿ.ಜಿ.ಗಳಿಗೆ 6 ತಿಂಗಳಿಗೊಮ್ಮೆ ಭೇಟಿ ನೀಡಿ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ ಎಂದು ಪರಿಶೀಲಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ.

ಮಾರ್ಗಸೂಚಿಗಳೇನು?

•ಪಿ.ಜಿ.ಗಳ ಪ್ರವೇಶ/ ನಿರ್ಗಮ ದ್ವಾರ ಮತ್ತು ಆವರಣದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು. 90 ಬ್ಯಾಕ್‌ಅಪ್ ಹೊಂದಿರಬೇಕು.

•ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪಿ.ಜಿ.ಗಳಲ್ಲಿ ಪ್ರತಿಯೊಬ್ಬ ನಿವಾಸಿಗೆ 70 ಚದರ ಅಡಿ ಕನಿಷ್ಠ ಜಾಗವಿರಬೇಕು. ಕಟ್ಟಡದಲ್ಲಿ ಸೌಕರ್ಯಕ್ಕನುಗುಣವಾಗಿ ನಿರ್ದಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿ ಇದೆ.

• ಪಿ.ಜಿ.ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಹಾಗೂ ನೈರ್ಮಲ್ಯ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೌಲಭ್ಯವಿರಬೇಕು.

• ಪಿ.ಜಿ.ಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರಬೇಕು. ಪ್ರತಿಯೊಬ್ಬ ವಾಸಿಗೆ ಪ್ರತಿ ದಿನ 135 ಲೀಟರು ನೀರಿನ ಲಭ್ಯತೆ ಇರುವುದನ್ನು / ಉದ್ದಿಮೆದಾರರು ಖಾತರಿಪಡಿಸಬೇಕು.

• ಪಿ.ಜಿ.ಗಳಲ್ಲಿ ಉದ್ದಿಮೆದಾರರು ಅಡುಗೆ ಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರವಾನಗಿ ಮೂರು ತಿಂಗಳೊಳಗೆ ಕಡ್ಡಾಯವಾಗಿ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದಿಂದ ಪರವಾನಗಿ ಪಡೆಯಬೇಕು.

• ಪಿ.ಜಿ. ನಿವಾಸಿಗಳ ಸುರಕ್ಷತೆಗೆ ಕನಿಷ್ಠ ಒಬ್ಬ ಸಿಬ್ಬಂದಿಯನ್ನು 24 ಗಂಟೆಗಳ ಕಾಲ ನಿಯೋಜಿಸಬೇಕು.

• ಪಿ.ಜಿ.ಗಳು ವಾಣಿಜ್ಯ ಪರವಾನಗಿ ಪತ್ರ ಪಡೆಯುವಾಗ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿರುವ ಬಗ್ಗೆ ಸಕ್ಷಮ ಪ್ರಾಧಿಕಾರದ ಅಧಿಕೃತ ಪ್ರಮಾಣ ಪತ್ರ ಸಲ್ಲಿಸಬೇಕು.

• ಪಿ.ಜಿ. ಕಟ್ಟಡದಲ್ಲಿ ಬಿಬಿಎಂಪಿ ಸಹಾಯವಾಣಿ 1533, ಪೊಲೀಸ್ ಇಲಾಖೆ ಸಹಾಯವಾಣಿ 101 ಫಲಕವನ್ನು ಪ್ರದರ್ಶಿಸಬೇಕು.

ಪಿ.ಜಿ.ಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಅಳವಡಿಸಬೇಕು. ಪಿ.ಜಿ.ಗಳ ಘನತ್ಯಾಜ್ಯ ವಿಂಗಡಿಸಿ, ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು.

Related Post

Leave a Reply

Your email address will not be published. Required fields are marked *