ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾಂಸ್ಕೃತಿಕ ಸಮುಚ್ಛಯ ನಿರ್ವಹಣಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಹರ್ ಘರ್ ತಿರಂಗಾ-2024 ಅಭಿಯಾನ ಅಂಗವಾಗಿ ಆ.12 ರಂದು ಸಂಜೆ 6.30 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ನಾಡೋಜ ಮನ್ಸೂರ್ ಬಯಲು ರಂಗಮAದಿರದಲ್ಲಿ “ತಿಂಗಳು ಸೊಬಗು” ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಬಳ್ಳಾರಿಯ ಮೂನ್ ವಾಕರ್ಸ್ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ದೇಶಭಕ್ತಿ ಗೀತೆಗಳ ಸಮೂಹ ನೃತ್ಯ ಹಾಗೂ ಬಳ್ಳಾರಿ ತಾಲ್ಲೂಕಿನ ಶಂಕರಬAಡೆ ಗ್ರಾಮದ ಪಿ.ಸಣ್ಣ ಹೊನ್ನೂರ್‌ಸಾಬ್ ಮತ್ತು ಸಂಗಡಿಗರ ವತಿಯಿಂದ ರಾಮಾಯಣ ಬಯಲಾಟ ಸನ್ನಿವೇಶಗಳ ಕುರಿತು ನಾಟಕ ಕಾರ್ಯಕ್ರಮ ಇರಲಿದೆ.
ಸಾರ್ವಜನಿಕರು ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.