ಬೆಂಗಳೂರು ನಗರ ಜಿಲ್ಲೆ, : ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ ದಯಾನಂದ್ ಮತ್ತು ರಾಜಭವನದ ವಿಶೇಷ ಕಾರ್ಯದರ್ಶಿಗಳಾದ ಆರ್ ಪ್ರಭುಶಂಕರ್ ಅವರು ಶುಕ್ರವಾರ ಬೆಂಗಳೂರಿನಲ್ಲಿರುವ ನಾಲ್ವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ, ಸಿಹಿ ನೀಡುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಮೊದಲಿಗೆ ಯಲಚೇನಹಳ್ಳಿಯ ನಂಜಪ್ಪ ಲೇಔಟ್ ನಲ್ಲಿರುವ ಸ್ವಾತಂತ್ರ ಹೋರಾಟಗಾರರಾದ ಎಸ್ ವಿ ಟಿ ಗುಪ್ತಾ ಅವರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ, ಪ್ರಮಾಣ ಪತ್ರ ನೀಡಿದರು.
ನಂತರ ಬನಶಂಕರಿ 3ನೇ ಹಂತದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶಂಕರನಾರಾಯಣ ರಾವ್ ಅವರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ, ಅವರ ಕುಶಲೋಪರಿ ವಿಚಾರಿಸಿದ ಜಿಲ್ಲಾಧಿಕಾರಿ ಹಾಗೂ ವಿಶೇಷ ಕಾರ್ಯದರ್ಶಿಗಳು, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟ ತಮಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ತದ ನಂತರ ಮಲ್ಲೇಶ್ವಂರಂನಲ್ಲಿರುವ ಶ್ರೀ ನಾಗಭೂಷಣ್ ರಾವ್ ಅವರ ಮನೆಗೆ ತೆರಳಿದ ಅಧಿಕಾರಿಗಳು, ನಾಗಭೂಷಣ್ ರಾವ್ ಅವರನ್ನು ಸನ್ಮಾನಿಸಿ, ಸಿಹಿ ನೀಡಿ, ಕುಶಲೋಪರಿ ವಿಚಾರಿಸಿದರು.
ಭೂಪಸಂದ್ರದ ವಿನಾಯಕ ಲೌಔಟ್ ನಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರಾದ ಕೆ ಸಿ ನಾರಾಯಣಪ್ಪ ಅವರನ್ನು ಭೇಟಿ ಮಾಡಿ, ಸನ್ಮಾಸಿದರು.