ಬೆಂಗಳೂರು ಗ್ರಾಮಾಂತರ ಜಿಲ್ಲೆ : ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಆಯೋಜನಾ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಡಿ. ದೇವರಾಜ ಅರಸು ಅವರ 109 ನೇ ಜಯಂತಿ ಆಚರಣೆಯ ಪ್ರಯುಕ್ತ ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನು ಅವರು ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ಅವರ 109 ನೇ ಜಯಂತಿಯನ್ನು ಜಿಲ್ಲಾಮಟ್ಟದಲ್ಲಿ ದೇವನಹಳ್ಳಿ ಟೌನ್ ನಲ್ಲಿರುವ ಡಿ. ದೇವರಾಜು ಅರಸು ಭವನದಲ್ಲಿ ಆಚರಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಎಲ್ಲಾ ಗಣ್ಯರನ್ನು ಆಹ್ವಾನಿಸಬೇಕು, ಕಾರ್ಯಕ್ರಮದ ವೇದಿಕೆ ಅಚ್ಚುಕಟ್ಟಾಗಿ ನಿರ್ಮಿಸಿ, ವಿಶೇಷ ಉಪನ್ಯಾಸ ನೀಡಲು ಪರಿಣಿತ ಕರೆಸಿ, ಕಲಾ ತಂಡಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮ ವಹಿಸಿ, ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕಾರ್ಯಕ್ರಮದ ಅರ್ಥ ಪೂರ್ಣವಾಗಿ ಆಚರಿಸಲು ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ, ಹಿಂದುಳಿದ ವರ್ಗಗಳ ಕಲ್ಯಾಣ ಜಿಲ್ಲಾಧಿಕಾರಿ ನಿರುಪಮಾ ಸಿ ಮೌಳಿ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು.