ಚಿತ್ರದುರ್ಗ : ಭಾರತದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಆ. 15 ರಂದು ಬೆಳಿಗ್ಗೆ 09 ಗಂಟೆಗೆ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಜರುಗಲಿದೆ. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಸಂಸದ ಗೋವಿಂದ ಎಂ. ಕಾರಜೋಳ ಅವರ ಘನ ಉಪಸ್ಥಿತಿಯಲ್ಲಿ ಜರುಗುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ವಹಿಸುವರು.
ಕಾರ್ಯಕ್ರಮದಲ್ಲಿ ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ. ಅನ್ವರ್ ಭಾಷಾ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷೆ ಸವಿತಾ ರಘು, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್ ಸೇರಿದಂತೆ ವಿವಿಧ ಗಣ್ಯರು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಧರ್ಮೇಂಧರ್ ಕುಮಾರ್ ಮೀನಾ ಅವರು ಸಮಾರಂಭದಲ್ಲಿ ಭಾಗವಹಿಸುವರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅಂದು ಸಂಜೆ 06 ಗಂಟೆಗೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಹಾಗೂ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ತ.ರಾ.ಸು. ರಂಗಮಂದಿರದಲ್ಲಿ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.