ಚಿತ್ರದುರ್ಗ ಆಗಸ್ಟ್.12 : ಚಿತ್ರದುರ್ಗ ಸರ್ಕಾರಿ ಶಿಕ್ಷಕರ ಶಿಕ್ಷಣ ತರಬೇತಿ ಮಹಾವಿದ್ಯಾಲಯದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೂರು ದಿನಗಳ ವಿಶೇಷ ಜಾಗೃತಿ ಅಭಿಯಾನದಡಿ ಮಹಿಳಾ ಮತ್ತು ಮಕ್ಕಳ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.
ಜಿಲ್ಲಾ ಮಿಷನ್ ಸಂಯೋಜಕ ಬಿ.ವಿನಯ್ ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟುವ ಶಿಕ್ಷಕರ ಪಾತ್ರ ಮಹತ್ವದ್ದು. ಬಾಲ್ಯ ವಿವಾಹ ನಡೆಯುವುದು ಕಂಡುಬಂದು ಮಕ್ಕಳ ಸಹಾಯವಾಣಿ 1098 ಕರೆ ಮಾಡುವಂತೆ ಪ್ರಸಾರ ಮಾಡಿದರು.
ಜೆಂಡರ್ ಸ್ಪೆಷಲಿಸ್ಟ್ ಡಿ.ಗೀತಾ ಮಾತನಾಡಿ, ಲಿಂಗಕ್ಕೆ ಮತ್ತು ಲಿಂಗ ಸಮಾನತೆಯ ಬಗ್ಗೆ ಪ್ರಶಿಕ್ಷಣಾರ್ಥಿಗಳಿಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರು ಹಾಗೂ ಶಿಕ್ಷಣಾರ್ಥಿಗಳು ಇದ್ದರು.