ಚಿತ್ರದುರ್ಗ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ, ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಹಾಗೂ ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರ ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಆಗಸ್ಟ್ 13 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜೆ.ಎಂ.ಎಫ್.ಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಮೀ. ಪಿ. ನಂದ್ಯಾಲ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್, ಪೊಲೀಸ್ ಅಧೀಕ್ಷಕ ಧರ್ಮೇಂದ್ರಕುಮಾರ್ ಮೀನಾ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಜೆ.ಎಂ.ಎಫ್.ಸಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹೇಮ.ಹೆಚ್.ಆರ್, ಚಳ್ಳಕೆರೆ ಬಾರ್ ಕೌನ್ಸಿಲ್ ಅಧ್ಯಕ್ಷ ಕೆ.ಎಂ.ನಾಗರಾಜ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಪ್ರಭಾಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಡಿ.ಕೆ.ಶೀಲಾ, ಜಿ.ಟಿ.ಬಸವರಾಜ್, ಬಾಲ ನ್ಯಾಯ ಮಂಡಳಿ ಸದಸ್ಯರಾದ ಸುಮನ ಎಸ್ ಅಂಗಡಿ, ಮಧುಕರ್, ತಹಶೀಲ್ದಾರ್ ರೆಹಾನ್ ಪಾಷ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್.ಈ, ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರಿಪ್ರಸಾದ್.ಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್.ಕೆ.ಎಸ್. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಾಶಿ ಭಾಗವಹಿಸುವರು.
ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯ ಯನಿಸೆಫ್ ಮಕ್ಕಳ ಸಂರಕ್ಷಣ ಯೋಜನೆ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ಕಾರ್ಯಗಾರ ನಡೆಸಿಕೊಡುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತ.ಸಿ ತಿಳಿಸಿದ್ದಾರೆ.