ಚಿತ್ರದುರ್ಗ 14: ಭಾರತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪೊಲೀಸ್ ಇಲಾಖೆ ವತಿಯಿಂದ ಹೆಲ್ಮೆಟ್ ಜಾಗೃತಿ ಹಾಗೂ ಹರ್ ಘರ್ ತಿರಂಗಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಿಂದ ಆರಂಭವಾದ ಹೆಲ್ಮೆಟ್ ಜಾಗೃತಿ ಜಾಥಾವು ಸಂಗೋಳ್ಳಿ ರಾಯಣ್ಣ ವೃತ್ತ, ಗಾಂಧಿ ವೃತ್ತ, ಎಸ್‍ಬಿಎಂ ವೃತ್ತ ಹಾಗೂ ಪ್ರವಾಸಿ ಮಂದಿರ ಮಾರ್ಗವಾಗಿ ಒನಕೆ ಓಬವ್ವ ವೃತ್ತದವರೆಗೂ ನಡೆಯಿತು.
ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಶಿಸ್ತುಬದ್ಧವಾಗಿ ಬೈಕ್‍ನಲ್ಲಿ ಹೆಲ್ಮೆಟ್ ಧರಿಸಿ, ಜನರಲ್ಲಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿವೈಎಸ್‍ಪಿ ದಿನಕರ್ ಸೇರಿದಂತೆ ಪೊಲೀಸ್ ಇಲಾಖೆ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.