78ನೇ ಭಾರತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ, ಸಡಗರದಿಂದ ಆಚರಿಸಲು ಜಿಲ್ಲೆಯಾದ್ಯಂತ ಸಕಲ ರೀತಿಯಲ್ಲೂ ಸಿದ್ದತೆ

ಚಿತ್ರದುರ್ಗ ಆಗಸ್ಟ್ 14:  ಆಗಸ್ಟ್ 15 ರಂದು ನಡೆಯಲಿರುವ 78ನೇ ಭಾರತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ, ಸಡಗರದಿಂದ ಆಚರಿಸಲು ಜಿಲ್ಲೆಯಾದ್ಯಂತ ಸಕಲ ರೀತಿಯಲ್ಲೂ ನಡೆದಿದೆ.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿರುವ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾನದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಜಿಲ್ಲಾ ಮಟ್ಟದ ಸ್ವಾತಂತ್ರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಂಗಳವಾರದ ಜಾವ ಮಳೆ ಸುರಿದ ಹಿನ್ನಲೆಯಲ್ಲಿ ಮೈದಾನವನ್ನು ಸಂಪೂರ್ಣವಾಗಿ ಬೆಳಗಿಸಿ, ಪಥ ಸಂಚಲನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಸುಗಮವಾಗಿ ನಡೆಯುವಂತೆ ಮಣ್ಣು ಹರಡುವ ಮೂಲಕ ಮೈದಾನವನ್ನು ಸಮತಟ್ಟುಗೊಳಿಸಲಾಗಿದೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಹಿಂದೆ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಚರ್ಚಿಸುವಂತೆ, ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜನೆಗೆ ಕ್ರಮವಹಿಸಲಾಗಿದೆ.

ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಇದೇ ಆಗಸ್ಟ್ 15 ರಂದು ಬೆಳಿಗ್ಗೆ 9ಕ್ಕೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ನೆರವೇರಲಿದೆ, ರಾಷ್ಟ್ರಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ನೆರವೇರಿಸಿ, ಸ್ವಾತಂತ್ರೋತ್ಸವ ಸಂದೇಶ ನೀಡಿದರು. ಸ್ವಾತಂತ್ರೋತ್ಸವ ಆಚರಣೆಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ, ಸಮಿತಿಗಳು ತಮ್ಮ ಹಂತದಲ್ಲಿ ಭಾರತ ಸ್ವಾತಂತ್ರ್ಯೋತ್ಸವದ ಎಲ್ಲಾ ಯೋಜಿತವಾಗಿ ರೂಪಿಸಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ.

ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸ್ವಾಗತ ಕಮಾನು ವ್ಯವಸ್ಥೆ, ದೀಪಾಲಂಕಾರ, ಧ್ವನಿವರ್ಧಕ ಮತ್ತು ಕುಡಿಯುವ ನೀರು ವ್ಯವಸ್ಥೆ, ತೋಟಗಾರಿಕೆ ಇಲಾಖೆಯಿಂದ ವಿವಿಧ ಬಗೆಯ ಹೂವಿನ ಕುಂಡಗಳ ವೇದಿಕೆ ಹಾಗೂ ಧ್ವಜಸ್ತಂಭದ ಸುತ್ತು ಸಿಂಗರಿಸಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಮಾಧ್ಯಮದವರು, ಸಾರ್ವಜನಿಕರು ಆಸಿನರಾಗಲು ಪ್ರತ್ಯೇಕವಾಗಿ ಸೂಕ್ತ ಆಸನದ ವ್ಯವಸ್ಥೆ ಮಾಡಲಾಗಿದೆ. ಮೈದಾನದಲ್ಲಿ ಅಗತ್ಯಕ್ಕೆ ಅನುಗುಣವಾಗಿ ತಾತ್ಕಾಲಿಕವಾಗಿ ಮೊಬೈಲ್ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ.

ಪಥ ಸಂಚಲನಕ್ಕೆ ಪೊಲೀಸ್ ಸಿಬ್ಬಂದಿ, ಹೋಂ ಗಾರ್ಡ್, ಅರಣ್ಯ ಇಲಾಖೆ, ಅಬಕಾರಿ, ಎನ್‌ಸಿಸಿ ಹಾಗೂ ಪ್ರೌಢಶಾಲಾ ಮಕ್ಕಳು ಸೇರಿದಂತೆ ಉತ್ತಮ ತುಕಡಿ ಪರೇಡ್ ವ್ಯವಸ್ಥೆಗೆ ಸಜ್ಜುಗೊಳಿಸಲಾಗಿದೆ, ಪಥಸಂಚಲನದಲ್ಲಿ ಭಾಗವಹಿಸುವ ತಂಡಗಳಿಗೆ ತರಬೇತಿ ನೀಡಿ, ಪಥಸಂಚಲನವನ್ನು ಬಹಳ ಶಿಸ್ತಿನಿಂದ ನಡೆಸಲಾಗುತ್ತಿದೆ.

ಜಿಲ್ಲಾಧಿಕಾರಿ ಟಿ. ವೆಂಕಟೇಶ್, ನಗರಸಭೆ ಪೌರಾಯುಕ್ತೆ ರೇಣುಕಾ ಅವರು ಬುಧವಾರದಂದು ಮಧ್ಯಾಹ್ನ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನಕ್ಕೆ ಭೇಟಿ ನೀಡಿ, ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸಿದ್ಧತೆಯ ಪರಿಶೀಲನೆ.

ಸರ್ಕಾರಿ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ:

**********ಜಿಲ್ಲೆಯಲ್ಲಿರುವ ವಿವಿಧ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ನಗರದ ವಿವಿಧ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಹರ್ ಘರ್ ತಿರಂಗಾ ಅಭಿಯಾನ: ಭಾರತ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಬೈಕ್ ರ್ಯಾಲಿ ತಿರಂಗಾ ಯಾತ್ರೆ ಸೇರಿದಂತೆ ವಿವಿಧ ರೀತಿಯ ಜಾಥಾ ಕಾರ್ಯಕ್ರಗಳನ್ನು ನಡೆಸುವ ಮೂಲಕ ಹರ್ ಘರ್ ತಿರಂಗ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

Related Post

Leave a Reply

Your email address will not be published. Required fields are marked *