Breaking
Wed. Dec 25th, 2024

78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ಗ್ಯಾರಂಟಿ ಯೋಜನೆಗಳು ನಿರಾಂತಕವಾಗಿ ಮುಂದುವರೆಯಲಿವ

ಚಿತ್ರದುರ್ಗ ಆಗಸ್ಟ್ 15: ಸರ್ಕಾರವು ಜನರ ಸರ್ವತೋಮುಖ ಏಳಿಗೆಗಾಗಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಿರಾತಂಕವಾಗಿ ಸಾಗುತ್ತಿವೆ, ಮುಂದೆಯೂ ಯಾವುದೇ ಅಡ್ಡಿಯಿಲ್ಲದೆ ಸಾಗುವ ಭರವಸೆಯನ್ನು ಯೋಜನೆ ಮತ್ತು ಸಾಂಸ್ಕೃತಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಡಿ.ಸುಧಾಕರ್ ಅವರು ಪರಿಶೀಲಿಸುತ್ತಾರೆ.

ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಗುರುವಾರ ಉದ್ಘಾಟನೆಗೊಂಡ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಅವರು, ಗೌರವ ರಕ್ಷೆ ಸ್ವೀಕರಿಸಿ ನಂತರ ತಮ್ಮ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ಪ್ರದರ್ಶಿಸಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಡಿ 4.50, ಗೃಹಜ್ಯೋತಿ ಲಕ್ಷ ಯೋಜನೆ ಅಡಿ 3.71 ಲಕ್ಷ, ಗೃಹಲಕ್ಷ್ಮೀ ಯೋಜನೆ ಅಡಿ 3.81, ಯುವನಿಧಿ ಯೋಜನೆ ಅಡಿ 4726 ಹಾಗೂ ಶಕ್ತಿ ಯೋಜನೆ 2.60 ಕೋಟಿ ಮಹಿಳೆಯರಿಗೆ ಸದುಪಯೋಗವಾಗಿದೆ. ಇಡೀ ದೇಶದಲ್ಲಿಯೇ ಮೊದಲು ಜಾರಿಗೆ ತಂದಿರುವ ಈ ಐದು ಗ್ಯಾರಂಟಿ ಯೋಜನೆಗಳು ಬಡವರನ್ನು, ಕೆಳವರ್ಗದ ಜನರು, ಮಹಿಳೆಯರನ್ನು ಸಬಲೀಕರಿಸಿ ಸಮಾಜದ ಮುಖ್ಯ ವಾಹಿನಿಗೆ ತರಲು ಯಶಸ್ವಿಯಾಗುತ್ತಿವೆ. ಬಡತನವ ಬುಡಮಟ್ಟ ಕೀಳ ಬನ್ನಿ ಎಂದು ರಾಷ್ಟ್ರಕವಿ ಕುವೆಂಪುರವರು ಕರೆಕೊಟ್ಟಂತೆ ಬಡತನ ನಿರ್ಮೂಲನೆಗಾಗಿ, ಯುವಕರಿಗೆ ಉದ್ಯೋಗ ನೀಡುವುದಕ್ಕಾಗಿ ಮತ್ತು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ನುಡಿದಂತೆ ನಡೆದ ನಮ್ಮ ಸರ್ಕಾರ” ಎಂದು ಹೇಳಿದಾಗ ನನಗೆ ಹೆಮ್ಮೆ ಎನಿಸುತ್ತದೆ.

ಮಹಾತ್ವಾಕಾಂಕ್ಷೆ ಭದ್ರಾ ಮೇಲ್ದಂಡೆ ಯೋಜನೆಯು ಸಾಕಾರಗೊಳ್ಳುವ ದಿನಗಳು ಸಮೀಪಿಸುತ್ತಿವೆ. ಭದ್ರಾ ಮೇಲ್ದಂಡೆ ಯೋಜನೆ ತಾಂತ್ರಿಕ ತೊಡಕಾಗಿದ್ದ ಅಬ್ಬಿನಹೊಳಲು ಸ್ಥಳಕ್ಕೆ ಜಲಸಂಪನ್ಮೂಲ ಸಚಿವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖುದ್ದು ಭೇಟಿ ನೀಡಿ, ರೈತರೊಂದಿಗೆ ಚರ್ಚಿಸಿ ಸಮಸ್ಯೆ ಇತ್ಯರ್ಥ ಪಡಿಸಿದ್ದಾರೆ. ಬಾಕಿ ಕಾಮಗಾರಿ ಪ್ರಾರಂಭಗೊಂಡಿದ್ದು, ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಾಮಗಾರಿಯನ್ನು ವೇಗಗೊಳಿಸಲು ಸಾಧ್ಯವಾಗಿಲ್ಲ, ಮುಂದಿನ ಮುಂಗಾರು ಅವಧಿ ಮುಕ್ತಾಯಗೊಳ್ಳುವುದರೊಳಗೆ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.

ಜಿಲ್ಲೆಯ ಜೀವನಾಡಿಯಾಗಿರುವ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪ್ರಸ್ತುತ ಭದ್ರಾ ಜಲಾಶಯದಿಂದ ನಿತ್ಯ 700 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಎತ್ತಿನಹೊಳೆ ಮುಖ್ಯ ಕಾಲುವೆ 32.50 ಕಿ.ಮೀ.ದಲ್ಲಿ ಬೇಲೂರು ತಾಲ್ಲೂಕಿನ ಹೊಲಬಗೆರೆ ಗ್ರಾಮದ ಎಸ್ಕೆಪ್ ಮುಖಾಂತರ ಬೆಟ್ಟದ ಆಲೂರು ಹಳೇಬೀಡು ಕೆರೆ ಬೆಳವಾಡಿ ಕೆರೆ- ಸುತ್ತಮುತ್ತಲಿನ ವೇದಾವತಿ ನದಿಗೆ ಹರಿಸಿ ಅಲ್ಲಿಂದ ವಾಣಿವಿಲಾಸ ಸಮುದ್ರದ ಸಾಗರ ಜಲಾಶಯ ತುಂಬಿಸುವ ಪ್ರಸ್ತಾವನೆ ಇದ್ದು, ಇಲ್ಲದೇ ಲಿಂಗನಮಕ್ಕಿ4 ಜಲಾಶಯದಿಂದ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಟಿ.ಎಂ.ಸಿ. ನೀರನ್ನು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಸರ್ಕಾರ ಮುಂದಾಗಿದೆ. ಈ ಯೋಜನೆಯಲ್ಲಿಯೂ ಸಹ ವಾಣಿವಿಲಾಸ ಸಾಗರ ಜಲಾಶಯದಲ್ಲಿ ನೀರು ಶೇಖರಿಸಿ ನಂತರ ಬೆಂಗಳೂರಿಗೆ ನೀರೊಯ್ಯುವ ಪ್ರಸ್ತಾವನೆಯ ಸರ್ವೆ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಒಟ್ಟಾರೆಯಾಗಿ ಮುಂದಿನ ದಿನಗಳಲ್ಲಿ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯವು ಭರ್ತಿಯಾಗುವ ಎಲ್ಲಾ ಅವಕಾಶಗಳು ದಟ್ಟವಾಗಿದ್ದು, ಇದರಿಂದ ನಮ್ಮ ರೈತರ ಮೊಗದಲ್ಲಿ ಮಂದಹಾಸ ಮೂಡುವುದಲ್ಲದೇ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವು ಸುಮಾರು ನಿಶ್ಚಿತವಾಗಿದೆ ಎಂದು ಸಚಿವ ಡಿ.ಸುಧಾಕರ್ ಅವರು ಭರವಸೆ ನೀಡಿದರು.

ಬೆಳೆ ಸಮೀಕ್ಷೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಪೂರ್ವ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 1,30,694 ರೈತರ ತಾಕುಗಳು 1,28,375 ತಾಕುಗಳ ಬೆಳೆ ಸಮೀಕ್ಷೆಯಾಗಿದೆ. 2023 ರ ಮುಂಗಾರು ಹಂಗಾಮಿನಲ್ಲಿ 81501 ರೈತರು ರೂ.284.22 ಕೋಟಿ ಬೆಳೆ ವಿಮೆ ಪಡೆದಿದ್ದಾರೆ. ಮತ್ತು 2024 ರ ಮುಂಗಾರು ಹಂಗಾಮಿನಲ್ಲಿ 1,12,101 ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಿದ್ದು, ಜಿಲ್ಲೆಯಲ್ಲಿ ರಾಜ್ಯದಲ್ಲಿ 8ನೇ ಸ್ಥಾನದಲ್ಲಿದೆ. 2023 ರ ಮುಂಗಾರು ಹಂಗಾಮಿನಲ್ಲಿ 1,44,166 ರೈತರಿಗೆ ರೂ. 125.75 ಪಾರದರ್ಶಕವಾಗಿ ಫ್ರೂಟ್ಸ್ ಪರಿಹಾರ ತಂತ್ರಾಂಶಗಳ ಮೂಲಕ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಿರುವುದು ನಮ್ಮ ಸರ್ಕಾರದ ಹೆಮ್ಮೆಯ ಕೋಟಿ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ರಾಜ್ಯ ಸರ್ಕಾರವು ಅಭಿವೃದ್ಧಿಗೆ ಬದ್ಧವಾಗಿದೆ ರಾಜ್ಯದ ಸಮಗ್ರ ಅಭಿವೃದ್ಧಿ, ಅದಕ್ಕಿಂತ ಹೆಚ್ಚಾಗಿ ಗ್ರಾಮೀಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರ ಇತ್ತೀಚಿಗೆ ವಿದ್ಯಾರ್ಥಿ ವೇತನ ಘೋಷಿಸಿದೆ. ಸಂಧ್ಯಾ ಸುರಕ್ಷಾ ಯೋಜನೆಡಿ ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನರ ಮಾಶಾಸನ ನೀಡುತ್ತಿಲ್ಲ, ಮಾತೃಪೂರ್ಣ ಯೋಜನೆ, ಪೆÇೀಷಣ್ ಅಭಿಯಾನ ಯೋಜನೆ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಸ್ತ್ರೀಶಕ್ತಿ ಯೋಜನೆ, ಭಾಗ್ಯಲಕ್ಷ್ಮೀ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಸ್ವಾಧಾರ ಶಕ್ತಿಸದನ ಯೋಜನೆ, ಸಾಂತ್ವನ ಯೋಜನೆಗಳ ಮುಖಾಂತರ ಆರ್ಥಿಕವಾಗಿ ಹಿಂದುಳಿದವರು, ದುರ್ಬಲರು ಮತ್ತು ಹಿಂದುಳಿದ ಸರ್ಕಾರಿ ವರ್ಗಗಳ ಏ. ನಿರಂತರವಾಗಿ ಶ್ರಮಿಸುತ್ತಿದೆ. ಜಿಲ್ಲೆಯಲ್ಲಿ ಕೃಷಿ, ನೀರಾವರಿ, ಶಿಕ್ಷಣ, ಸಾರಿಗೆ-ಸಂಪರ್ಕ, ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ, ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಅಭಿವೃದ್ಧಿ, ಅಲ್ಪ ಸಂಖ್ಯಾತರು, ಮಹಿಳೆಯರು, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸಿದ್ದರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸಿದ್ದರು. ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೆÇಲೀಸ್ ವರಿμÁÁ್ಠಾಧಿಕಾರಿ ಧರ್ಮೇಂದರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ.ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು, ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

ಆಕರ್ಷಕ ಪಥ ಸಂಚಲನ : ಭಾರತ ಸ್ವಾತಂತ್ರ್ಯ ದಿನಾಚರಣೆಯ ಪಥ ಸಂಚಲನದಲ್ಲಿ ಡಿಎಆರ್ ಆರ್ ಪಿ ಹೆಚ್.ಡಿ.ರುದ್ರೇಶ್ ಅವರು ಪೇರಡ್ ಕಮಾಂಡರ್ ಆಗಿ ಕಾರ್ಯನಿರ್ವಹಿಸಿದರು. ನಾಗರಿಕ ಪೆÇಲೀಸ್, ಸಶಸ್ತ್ರ ಪೆÇಲೀಸ್, ಅರಣ್ಯ, ಗೃಹ ರಕ್ಷಕ, ಎನ್.ಸಿ.ಸಿ. ಸೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಹಲವು ಶಾಲಾ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು. ಪೆÇಲೀಸ್ ವಾದ್ಯ ವೃಂದ ಕವಾಯತಿನಲ್ಲಿ ಸುಶ್ರಾವ್ಯವಾಗಿ ವಾದ್ಯ ನುಡಿಸಿದರು.

ದೇಶ ಪ್ರೇಮ ಅನಾವರಣಗೊಳಿಸಿದ ಸಾಂಸ್ಕøತಿಕ ಕಾರ್ಯಕ್ರಮಗಳು : ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನಂತರ ಶಾಲಾ ಮಕ್ಕಳ ನಡೆಸಿಕೊಟ್ಟ ಸಾಂಸ್ಕøತಿಕ ಕಾರ್ಯಕ್ರಮಗಳು ಸಾರ್ವಜನಿಕರಲ್ಲಿ ದೇಶ ಪ್ರೇಮ ಅನಾವರಣಗೊಳಿಸಿದವು.

ಕೋಟೆಗೊಳ್ಳ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟ ಶೂರ ಸಂಗಮೇಶ ರಾಯಣ್ಣನ ಕುರಿತು ಹಾಗೂ ಪಿಳ್ಳೇಕೆರನಹಳ್ಳಿ ಬಾಪೂಜಿ ಶಾಲೆಯ ವಿದ್ಯಾರ್ಥಿಗಳು ಸುರಪುರ ವೆಂಕಟಪ್ಪ ನಾಯಕ ಜೀವನ ವೃತ್ತಾಂತದ ನೃತ್ಯ ರೂಪಕವನ್ನು ಪ್ರದರ್ಶಿಸಿದರು. ವಿದ್ಯಾ ವಿಕಾಸ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ದೇಶದ ಸಾಂಸ್ಕøತಿಕ ವೈವಿಧ್ಯತೆ ಬಿಂಬಿಸುವ ನೃತ್ಯ ರೂಪಕ ನೋಡುಗರ ಮನಸೆಳೆಯಿತು.

 

Related Post

Leave a Reply

Your email address will not be published. Required fields are marked *