Breaking
Wed. Dec 25th, 2024

ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

ಬಳ್ಳಾರಿ,ಆ.16 : ಇಲ್ಲಿನ ಕೇಂದ್ರ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಅವರು ಬುಧವಾರ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ವೀಕ್ಷಣೆ ಮಾಡಿದರು.

ನಿರಾಶ್ರಿತರ ಪರಿಹಾರ ಕೇಂದ್ರದ ನಿವಾಸಿಗಳ ಯೋಗಕ್ಷೇಮ ಮತ್ತು ಆರೋಗ್ಯ ಊಟ ಉಪಚಾರದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದರು.

ಉತ್ತಮ ಗುಣಮಟ್ಟದ ಆಹಾರ ನೀಡಬೇಕು. ಸ್ನಾನಕ್ಕೆ ಬಿಸಿನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸಿಬ್ಬಂದಿಗಳಿಗೆ ತಿಳಿಸಿದ ಅವರು, ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ನಿಮಗೆ ನೀಡಲಾಗುತ್ತದೆ ಎಂದು ಅಭಯ ನೀಡಿದರು.

ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಒಟ್ಟು 94 ಪುರುಷ ವೃದ್ಧ ನಿರಾಶ್ರಿತರು ಹಾಗೂ 34 ವೃದ್ಧ ಮಹಿಳಾ ನಿರಾಶ್ರಿತರಿದ್ದು, ಸುಮಾರು 128 ನಿರಾಶ್ರಿತರು ಊಟ ಮತ್ತು ಇನ್ನಿತರ ಸೌಲಭ್ಯದಿಂದ ವಂಚಿತರಾಗದAತೆ ನಿಗಾವಹಿಸಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಏನಾದರೂ ಸಮಸ್ಯೆ ಕಂಡುಬAದಲ್ಲಿ ಗಮನಕ್ಕೆ ತರಬೇಕು ಎಂದರು.

ಇದೇ ವೇಳೆ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿನ ವೃದ್ಧರಿಗೆ ಸಮವಸ್ತç ಹಾಗೂ ಹಾಸಿಗೆ ದಿಂಬು ಹೊದಿಕೆಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಅಧೀಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Related Post

Leave a Reply

Your email address will not be published. Required fields are marked *