ದಾವಣಗೆರೆ : ಪಾಲಿಕೆಯ ಕಾರ್ಮಿಕರು, ಚಾಲಕರು ನಗರ ಸ್ವಚ್ಛತೆಯಲ್ಲಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ ಸ್ವಚ್ಛತೆ ಕಾಪಾಡುವಂತೆ ಲೋಕಸಭಾ ಸದಸ್ಯರಾದ ಡಾ ಪ್ರಭಾ ಮಲ್ಲಿಕಾರ್ಜುನ್ ಕರೆ ನೀಡಿದರು. ಮಹಾನಗರಪಾಲಿಕೆಯ ಅವರಗೊಳ್ಳ ತ್ಯಾಜ್ಯ ವಿಲೇವಾರಿ ಜಮೀನಿನಲ್ಲಿ ಸ್ವಚ್ಛಭಾರತ್ ಮಿಷನ್ ಯೋಜನೆಯಡಿ ರೂ.21.94 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಘನತ್ಯಾಜ್ಯ ವಸ್ತು ಸಂಸ್ಕರಣೆಗಾಗಿ ಪೆಂಿಸೆಸಿಂಗ್ PÉಡ್, ಕಾಂಕ್ರೀಟ್ ರಸ್ತೆ, ಚರಂಡಿ, ಸ್ಯಾನಿಟರಿ ಲ್ಯಾಂಡ್‌ಫಿಲ್ ಹಾಗೂ ಇತರೆ ಸಿವಿಲ್ ಕಾಮಗಾರಿಗಳು, ಸೆಗ್ರಿಗೇಶನ್, ಬೇಲಿಂಗ್ ಯಂತ್ರೋಪಕರಣಗಳನ್ನೊಳಗೊಂಡ ವಿಂಡೋ ಕಾಂಪೆÇಸ್ಟಿಂಗ್ ಘಟಕ ಹಾಗೂ 15 ನೇ ಹಣಕಾಸು ಆಯೋಗದ ಅನುದಾನದಲ್ಲಿ ತ್ಯಾಜ್ಯ ಸಂಗ್ರಹಣೆ ಹಾಗೂ ಸಾಗಾಣಿಕೆಗಾಗಿ ಖರೀದಿಸಲಾದ ಆಟೋ ಟಿಪ್ಪರ್, ಟ್ರ್ಯಾಕ್ಟರ್, ಸಕ್ಕಿಂಗ್ ಯಂತ್ರಗಳನ್ನು ಉದ್ಘಾಟಿಸಿ ಮಾತಾನಾಡಿದರು.
ನಗರದಲ್ಲಿನ ಸಮರ್ಪಕ ತ್ಯಾಜ್ಯ ನಿರ್ವಹಣೆಗಾಗಿ ಮಹಾನಗರಪಾಲಿಕೆಯ ತ್ಯಾಜ್ಯ ಸಂಗ್ರಹಣಾ ವಾಹನಗಳು ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸುತ್ತಿದ್ದು, ಸಾರ್ವಜನಿಕರು ತ್ಯಾಜ್ಯವನ್ನು ರಸ್ತೆ, ಚರಂಡಿ, ಖಾಲಿ ನಿವೇಶನಗಳಲ್ಲಿ ಎಸೆಯದೇ ಹಸಿಕಸ, ಒಣ ಕಸ ಹಾಗೂ ಅಪಾಯಕಾರಿ ತ್ಯಾಜ್ಯಗಳಾಗಿ ವಿಂಗಡಿಸಿ ಪ್ರತ್ಯೇಕವಾಗಿ ನೀಡಬೇಕೆಂದರು.
ತ್ಯಾಜ್ಯವಿಲೇವಾರಿ ಜಮೀನಿನಲ್ಲಿ ಕಳೆದ ಮೇ ತಿಂಗಳಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ ಬೆಳೆಹಾನಿಯಿಂದ ನಷ್ಟ ಅನುಭವಿಸಿದ ರೈತರಿಗೆ ಪರಿಹಾರವನ್ನು ವಿತರಿಸಿದರು. ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಮಾತನಾಡಿ ನಗರದ ತ್ಯಾಜ್ಯ ಸಂಸ್ಕರಣೆಗಾಗಿ ಉತ್ತಮ ಸಂಸ್ಕರಣಾ ಘಟಕ ನಿರ್ಮಿಸಿದ್ದು, ಎನ್‌ಟಿ ಆದೇಶದಂತೆ ನಗರದಲ್ಲಿ ಉತ್ಪತ್ತಿಯಾಗುವ ಪೂರ್ಣ ಪ್ರಮಾಣದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಗೊಬ್ಬರವಾಗಿ ಪರಿವರ್ತಿಸುವುದರಿಂದ ಉತ್ತಮ ಗೊಬ್ಬರ ದೊರೆಯಲಿದ್ದು, ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಉತ್ತಮ ಸಹಕಾರ ನೀಡಿರುವ ಅವರಗೊಳ್ಳ ಹಾಗೂ ಸ್ಥಳೀಯ ರೈತರಿಗೆ ಒದಗಿಸಲಾಗುವುದೆಂದು, ಕಸ ನಿರ್ವಹಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ನಗರದ ಸ್ವಚ್ಛತೆಗಾಗಿ ಎಲ್ಲ ಸಾರ್ವಜನಿಕರು ಸಹಕಾರ ನೀಡುವಂತೆ ತಿಳಿಸಿದರು.
ಮಹಾಪೌರರಾದ ವಿನಾಯಕ ಪೈಲ್ವಾನ್, ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಹೆಚ್. ಉದಯಕುಮಾರ್, ಮೀನಾಕ್ಷಿ ಜಗದೀಶ, ಅಬ್ದುಲ್ ಲತೀಫ್ ಪಾಲಿಕೆಯ ಸದಸ್ಯರುಗಳಾದ ಎ.ನಾಗರಾಜ್, ಚಮನ್ ಸಾಬ್ ಸುಧಾ ಮಂಜುನಾಥ ಇಟ್ಟಿಗುಡಿ, ಆಯುಕ್ತರಾದ ರೇಣುಕಾ, ಪಾಲಿಕೆಯ ಅಧಿಕಾರಿಗಳು, ಅವರಗೊಳ್ಳ ಗ್ರಾಮಸ್ಥರು ಭಾಗವಹಿಸಿದ್ದರು.