Breaking
Wed. Dec 25th, 2024

ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಆ.17 : ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಬಯಸುವವರಿಗೆ ಅನುಕೂಲವಾಗುವಂತೆ 2024-25ನೇ ಸಾಲಿನಲ್ಲಿ ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದಡಿಯಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಗಳಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾAಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲೆಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಗಳಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಮೆಲ್ಕಂಡ ಸೌಲಭ್ಯಗಳನ್ನು ಪಡೆಯಲು ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೆöÊಟ್ www.kaad.karnataka.gov.in ಅಥವಾ ಸಹಾಯವಾಣಿ ಸಂಖ್ಯೆ 080-22374832, ಮತ್ತು 8050770004, 8050770005 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.

 

Related Post

Leave a Reply

Your email address will not be published. Required fields are marked *