ಬಳ್ಳಾರಿ,ಆ.17 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮತ್ತು ಜಿಲ್ಲಾ ಖನಿಜಾ ಪ್ರತಿಷ್ಠಾನ ಟ್ರಸ್ಟ್ ಅನುದಾನದಡಿ ಬಳ್ಳಾರಿಯ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಯುವಕ-ಯುವತಿಯರಿಗೆ ಕೆ.ಎ.ಎಸ್ ಪರೀಕ್ಷೆಗೆ ಉಚಿತವಾಗಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಉದ್ದೇಶಿಸಿದ್ದು, ಪೂರ್ವಭಾವಿಯಾಗಿ “ಒಂದು ದಿನದ ಕಾರ್ಯಾಗಾರವನ್ನು” ಹಮ್ಮಿಕೊಳ್ಳಲಾಗಿದೆ.
ಆಸಕ್ತ 21 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಆಗಸ್ಟ್ 21 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆಯುವ ಕಾರ್ಯಾಗಾರದಲ್ಲಿ ಭಾಗವಹಿಸಿ, ಅರ್ಹತಾ ಪರೀಕ್ಷೆಗೆ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಕಾರ್ಯಾಗಾರದಲ್ಲಿ ಭಾಗವಹಿಸಿದ ಅರ್ಹ ಆಯ್ದ ಅಭ್ಯರ್ಥಿಗಳಿಗೆ ಮಾತ್ರ ಈ ತರಬೇತಿಗೆ ಅವಕಾಶ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶ್ಯಲಾಭಿವೃದ್ಧಿ ಕಚೇರಿ ಅಥವಾ ದೂ.08392-294230 ಮತ್ತು ಮೊ.9964502514, 9844444958, 8073852104 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.