ಚಾಮರಾಜನಗರ : ಇಂದು ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಾಮೂಹಿಕ ವಿವಾಹಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವುದಿಲ್ಲ. ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. 64 ಜೋಡಿಗಳು ವಿವಾಹವಾಗಲಿದ್ದು, ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ಕಳೆದ ವರ್ಷ ಸಿದ್ದರಾಮಯ್ಯ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡಿದ್ದರು.
ಆದರೆ, ತಾವು ಸಿಎಂ ಆಗಿರುವವರೆಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ ಎಂದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಒಪ್ಪಿಗೆ ನೀಡಿದ ಬಳಿಕ ಇದೀಗ ಸಿದ್ದರಾಮಯ್ಯ ಪ್ರವಾಸದ ವೇಳಾಪಟ್ಟಿ ಬದಲಾಗಿದೆ. ಅಧಿಕಾರಿಗಳು ವರನಿಗೆ ಚಿನ್ನದ ಬಳೆಗಳು, ಕಾಲುಂಗುರಗಳು ಮತ್ತು ಬಟ್ಟೆಗಳನ್ನು ವಿತರಿಸುತ್ತಾರೆ.
ಮಾದಪ್ಪ ದೇವಸ್ಥಾನದ ಎದುರಿನ ರಂಗಮಂದಿರದಲ್ಲಿ ಮದುವೆಗೆ ಸಿದ್ಧತೆ ನಡೆದಿದೆ. ಸಚಿವ ರಾಮಲಿಂಗಾರೆಡ್ಡಿ, ಸಚಿವ ವೆಂಕಟೇಶ್ ಸೇರಿದಂತೆ ಸ್ಥಳೀಯ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಇಂದು ಸಿಎಂ ಸಿದ್ದರಾಮಯ್ಯ ಆಲಮಟ್ಟಿ ಜಲಾಶಯಕ್ಕೆ ತೆರಳಿ ಬಾಗು ಅರ್ಪಿಸಲಿದ್ದಾರೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಕೃಷ್ಣಾ ನದಿಗೆ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ನೀರು ತುಂಬಿಸುವ ಅಂಗವಾಗಿ ಇಂದು ಮಧ್ಯಾಹ್ನ ಕೃಷ್ಣಾ ಜಲಾಶಯದಲ್ಲಿ ಗಂಗಾಪೂಜೆ ಹಾಗೂ ಜಲ ಅರ್ಪಣೆ ಕಾರ್ಯಕ್ರಮ ನಡೆಯಲಿದೆ.