ಹಾಸನ. ಆಗಸ್ಟ್ 23 : ಜಿಲ್ಲಾ ಗ್ರಂಥಾಲಯಗಳಲ್ಲಿ ಓದುಗರ ಅವಶ್ಯಕತೆಗೆ ಅನುಗುಣವಾಗಿ ಉತ್ತಮ ಪುಸ್ತಕಗಳನ್ನು ಖರೀದಿಸಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಹಾಗೂ ಕುಳಿತು ಓದಲು ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿ ನಡೆದ ಜಿಲ್ಲಾ ಗ್ರಂಥಾಲಯ ಪರಿಷತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಂಥಾಲಯಗಳ ಸ್ವಚ್ಛತೆಗೆ ಒತ್ತು ನೀಡಿ ಗ್ರಂಥಾಲಯಗಳ ಒಳಗೆ ಮತ್ತು ಹೊರಗೆ ಸ್ವಚ್ಛತೆ ಕಾಪಾಡಿ ಗ್ರಂಥಾಲಯ ಜಾಗ ಅತಿಕ್ರಮಣವಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಚನ್ನರಾಯಪಟ್ಟಣದ ಕೆ.ಸಿದ್ದಹಟ್ಟಿ ತಾಲೂಕಿನ ಅರಕಲಗೂಡು ಶಾಖೆ ಹಾಗೂ ಅಲೆಮಾರಿ ಗ್ರಂಥಾಲಯಗಳು ನೂತನ ಕಟ್ಟಡ ನಿರ್ಮಾಣಕ್ಕೆ ಅಂದಾಜು ವೆಚ್ಚದ ಪಟ್ಟಿಯನ್ನು ನರ್ಮಿತಿ ಕೇಂದ್ರ ಅಥವಾ ಲೋಕೋಪಯೋಗಿ ಇಲಾಖೆಯಿಂದ ಪಡೆಯಲು ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಾಂಡು, ಜಿಲ್ಲಾ ಗ್ರಂಥಾಲಯ ಉಪ ನಿರ್ದೇಶಕಿ ಹಸೀನಾ ತಾಜ್ ಮತ್ತಿತರರು ಉಪಸ್ಥಿತರಿದ್ದರು.