ಚಿತ್ರದುರ್ಗ. 27 : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ವಾಣಿಜ್ಯೋದ್ಯಮ ಅಭಿವೃದ್ಧಿ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರವು ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ “ಹತ್ತು ದಿನಗಳ ಉದ್ಯಮಿಗಳ ಅಭಿವೃದ್ಧಿ ಕಾರ್ಯಕ್ರಮ”ವನ್ನು ಆಗಸ್ಟ್ 28 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಿದೆ.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಆನಂದ, ದಾವಣಗೆರೆ ಸಿಡಕ್ನ ಜಂಟಿ ನಿರ್ದೇಶಕ ಆರ್.ಪಿ. ಪಾಟೀಲ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಟಿ.ವೇವಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ದಾವಣಗೆರೆ ಸಿಡಕ ತರಬೇತುದಾರ ವಿಜಯ್ ಸಹಾಯಕರಾಗಿ ಭಾಗವಹಿಸುವರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.