ಹಾಸನ :- ಸಮಾಜ ಸೇವಕ ಮಹಾಂತಪ್ಪ ಅವರ ಅಂತಿಮ ದರ್ಶನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಅವಕಾಶ ಕಲ್ಪಿಸಲಾಯಿತು. ಹಲವು ಸಂಘಟನೆಗಳ ಮುಖಂಡರು, ಸಾಹಿತಿಗಳು, ಅಧಿಕಾರಿಗಳು ಸೇರಿದಂತೆ ನೂರಾರು ಮಂದಿ ಆಗಮಿಸಿ ಅವರ ಅಂತಿಮ ದರ್ಶನ ಪಡೆದರು.
ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಒಂದು ನಿಮಿಷ ಮೌನ ಆಚರಿಸಿ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು.
ಈ ವೇಳೆ ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾಧಿಕಾರಿ ಮಹಮ್ಮದ್ ಸುಚಿತಾ, ಶಾಸಕ ಖುಲ್ಲಹಳ್ಳಿ ಸುರೇಶ್, ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಪ್ರೀತಮ್ ಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾಲೇಶ್ ಗೌಡ, ಕೈಗಾರಿಕೋದ್ಯಮಿ ಎಚ್.ಎ. ಕಿರಣ್ ಹಾಗೂ ಗಣ್ಯರು ಅಂತಿಮ ನಮನ ಸಲ್ಲಿಸಿದರು.