ಚಿತ್ರದುರ್ಗ. ಆಗಸ್ಟ್ 30 : ಪ್ಯಾನ್-ಇಂಡಿಯಾ ಪಾರುಗಾಣಿಕಾ ಮತ್ತು ಪುನರ್ವಸತಿ ಅಭಿಯಾನದ ಭಾಗವಾಗಿ, ಶುಕ್ರವಾರ ಚಿತ್ರದುರ್ಗದಲ್ಲಿ ಬಾಲ ಕಾರ್ಮಿಕ ಮತ್ತು ಯುವ ಕಾರ್ಮಿಕರ ನಿಷೇಧದ ಬಗ್ಗೆ ಗಮನ ಸೆಳೆಯಲಾಯಿತು.
ಚಿತ್ರದುರ್ಗದ ವಿವಿಧ ವಾಣಿಜ್ಯ ಸಂಸ್ಥೆಗಳು ಅಂಗಡಿ, ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಲೀಕರಿಗೆ ಮಾಹಿತಿ ನೀಡಿದರು.
ತಂಡದಲ್ಲಿ ಕಾರ್ಮಿಕ ನಿರೀಕ್ಷಕ ಪಿ.ಭೀಮೇಶ್, ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್, ಶಿಕ್ಷಣ ಇಲಾಖೆಯ ಬಿಆರ್‌ಪಿ ಮೈಲಾರಪ್ಪ, ಪೊಲೀಸ್ ಇಲಾಖೆಯಿಂದ ಶೃಂಗಾರ ಸಾಗರ್, ರುದ್ರೇಶ್ ಮಕ್ಕಳ ಸಲಹಾ ಕೇಂದ್ರದ ಅಧಿಕಾರಿಗಳು ಇದ್ದರು.