ಚಿತ್ರದುರ್ಗ 02 : ನಗರದ ಜಿಲ್ಲಾ ಪಂಚಾಯತಿ ಬಳಿಯಿರುವ ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಮಕ್ಕಳ ಶಾಲೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಸಬಲೀಕರಣ ಹಾಗೂ ಹಿರಿಯ ನಾಗರಿಕರ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಮಕ್ಕಳಿಗೆ ಪೌಷ್ಟಿಕ ಮತ್ತು ಉತ್ತಮ ಗುಣಮಟ್ಟದ ಆಹಾರವನ್ನು ನೀಡಬೇಕು. ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡಬೇಕು. ಹಾಸ್ಟೆಲ್ ಪಾಲಕರು ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವ ಜತೆಗೆ ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡುವಂತೆ ನೋಡಿಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಸಿದ್ದೇಶ್ವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ತಿಮ್ಮಪ್ಪ, ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ ಸವಿತಾ, ಜಿಲ್ಲಾ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಭಾಕರ್, ತಹಸೀಲ್ದಾರ್ ನಾಗವೇಣಿ ಇತರರು ಇದ್ದರು.