ದಾವಣಗೆರೆ : ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಸವಲತ್ತುಗಳಿಗಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು.
ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕು. ಜಾತಿ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಬ್ಯಾಂಕ್ ಪಾಸ್‌ಬುಕ್‌ನ ನಕಲು ಪ್ರತಿ, ಆಧಾರ್ ಕಾರ್ಡ್‌ನ ನಕಲು ಪ್ರತಿ ಮತ್ತು ನಿರ್ದೇಶಕರ ಪ್ರಮಾಣಪತ್ರದೊಂದಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಅರ್ಜಿಯ ಪ್ರತಿಯನ್ನು ಸಂಬಂಧಪಟ್ಟ ತಾಲೂಕಿನ ಉಪ ನಿರ್ದೇಶಕರು ಅಥವಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಿಂದ ಕೊಠಡಿ ಸಂ. 37. ದಾವಣಗೆರೆಯ ಜಿಲ್ಲಾಡಳಿತ ಭವನದ ಮೊದಲ ಮಹಡಿಯಲ್ಲಿ ಇಲ್ಲಿ ಸಲ್ಲಿಸಬೇಕು ಎಂದು ಜಂಟಿ ನಿರ್ದೇಶಕ ನಾಗರಾಜ ತಿಳಿಸಿದರು.