ಚಿತ್ರದುರ್ಗ, ಸೆಪ್ಟೆಂಬರ್ 10 : ರಾಜ್ಯದ ಉತ್ತರ ತುದಿಯಿಂದ ದಕ್ಷಿಣದ ತುದಿಯವರೆಗೆ ಮಾನವ ಸರಪಳಿ ನಿರ್ಮಿಸಿ ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ಸರಕಾರದ ಮಟ್ಟದಲ್ಲಿ ಸಿದ್ಧತೆ ನಡೆಸಲಾಗುತ್ತಿದೆ.
ಚಿತ್ರದುರ್ಗ ಜಿಲ್ಲೆಯ ಗಡಿ ಭಾಗವಾದ ಮೊಳಕಾಲ್ಮುರು ತಾಲೂಕಿನ ಕಣಿವೆಯಿಂದ ಚಳ್ಳಕೆರೆ, ಹಿರಿಯೂರು ಮೂಲಕ ಜವಗೊಂಡನಹಳ್ಳಿವರೆಗೆ ಸುಮಾರು 140 ಕಿ.ಮೀ.ನಷ್ಟು ಮಾನವ ಸರಪಳಿ ನಿರ್ಮಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸೆ.12ರಂದು ಮಧ್ಯಾಹ್ನ 3:00 ಗಂಟೆಗೆ ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಿದ್ಧತಾ ಸಭೆಯನ್ನು ಆಯೋಜಿಸಲಾಗಿದೆ.
ಜಿಲ್ಲೆಯ ಎಲ್ಲಾ ಸರಕಾರೇತರ ಸಂಸ್ಥೆಗಳ ಪದಾಧಿಕಾರಿಗಳು, ರೈತರು, ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಸಂಘಗಳ ಪದಾಧಿಕಾರಿಗಳು ಸೇರಿದಂತೆ ನಾನಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಗೆ ಹಾಜರಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೂಕ್ತ ಸಲಹೆಗಳು ಮತ್ತು ನಿರ್ದೇಶನಗಳು.