ತುಮಕೂರು, ಸೆಪ್ಟೆಂಬರ್ 15: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮದ ಬಳಿಯ ರಂಗನಹಟ್ಟಿ ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಅವಘಡ ಸಂಭವಿಸಿದ್ದು, ತಂದೆ, ಮಗ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ತಂದೆ ರೇವಣ್ಣ (46 ವರ್ಷ), ಮಗ ಶರತ್ (26 ವರ್ಷ) ದಯಾನಂದ ಮೃತರು. ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವ ವೇಳೆ ಇಂದು ಈ ಘಟನೆ ನಡೆದಿದೆ.
ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಶವಗಳಿಗಾಗಿ ಹುಡುಕಾಟ ನಡೆಸಿದ್ದು, ದಂಡಿನಶಿವಾರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.