ಚಿಕ್ಕೋಡಿ, ಸೆಪ್ಟೆಂಬರ್ 15 : ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥಾವನಿಧಿ ಘಾಟ್‌ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸ್ಥಾವನಿಧಿ ಘಾಟ್ ಬಳಿ ಎಂಟು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಸೈಕ್ಲಿಸ್ಟ್ ಮತ್ತು ಕಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಆರು ಜನರು ಗಾಯಗೊಂಡಿದ್ದಾರೆ.
ಸದ್ಯ ಗಾಯಗೊಂಡಿರುವ ಆರು ಮಂದಿ ನಿಪ್ಪಾಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಟೈನರ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ: ಇಬ್ಬರು ಸಾವು ತುಮಕೂರು: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಧುಗಿರಿ ಜಿಲ್ಲೆ ಹೊರವಲಯದ ಜಡೆಗೊಂಡನಹಳ್ಳಿ ಬಳಿ ನಡೆದಿದೆ. ತೇರಿಯೂರಿನ ಗೌತಮ್ (26) ಮತ್ತು ಬಂಡರಹಳ್ಳಿಯ ಅನಿಲ್ (26) ಮೃತರು. ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸ್ ಠಾಣೆಯ ಪಿಎಸ್ ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.