ಹಾಸನ, ಸೆಪ್ಟೆಂಬರ್ 21 : ಅಕ್ರಮ ಮದ್ಯ ಮಾರಾಟ, ನಿಗದಿತ ದಿನಾಂಕಕ್ಕಿಂತ ಮೊದಲು ಅಂಗಡಿ ಬಾಗಿಲು ತೆರೆಯುವುದು ಹಾಗೂ ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸತ್ಯಭಾಮಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಜಾಗೃತಿ ಮತ್ತು ವ್ಯವಸ್ಥಾಪನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಡುಗಡೆಯಾದವರಿಗೆ ಪುನರ್ವಸತಿ ವಲಯ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪುನರ್ವಸತಿ ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅರಕಲಗೂಡು ತಾಲೂಕಿನ ಕೊಳ್ಳಂಗಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ನಕಲಿ ಅಂಕಪಟ್ಟಿ ಸಲ್ಲಿಸಿರುವವರ ವಿರುದ್ಧ ಕ್ರಮಕೈಗೊಂಡು ದಾಖಲೆ ಸಮೇತ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಗಜೀವನರಾಂ ಭವನ ಹಾಗೂ ವಾಲ್ಮೀಕಿ ಭವನ ನಿರ್ಮಾಣಕ್ಕೆ ಜಾಗ ಗುರುತಿಸುವಂತೆ ತಹಸೀಲ್ದಾರ್‌ಗೆ ಬಾಬು ಆದೇಶಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಬೇಕು ಎಂದು ಕರೆ ನೀಡಿದರು.
ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯ್ದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಮೂಲಕ ದೌರ್ಜನ್ಯ ತಡೆಯುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ತಿಳಿಸಿದರು.
ಗೃಹ ಭಾಗ್ಯ ಯೋಜನೆಯಡಿ ನಾಗರಿಕರಿಗೆ ಮನೆ ನಿರ್ಮಿಸಿಕೊಡಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಚಂದ್ರಶೇಖರ್, ಸಹಾಯಕ ವಿಭಾಗಾಧಿಕಾರಿ ಶೃತಿ, ಕಲ್ಯಾಣಾಧಿಕಾರಿಗಳಾದ ದೂಧ್ ಫಿರ್, ಸಮಿತಿ ಸದಸ್ಯರಾದ ಮೇರಿ ಜೋಸೆಫ್, ಮಲ್ಲೇಶ್, ಶಿವಮ್ಮ, ನವೀನ್ ಸದಾ, ಬೈರೇಶ್ ಮತ್ತಿತರರು ಉಪಸ್ಥಿತರಿದ್ದರು.