ಚಿತ್ರದುರ್ಗ : ಇದೇ ಸೆಪ್ಟೆಂಬರ್ 28 ರಂದು ಚಿತ್ರದುರ್ಗದ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಸಂಚಾರ ಸುವ್ಯವಸ್ಥೆಗಾಗಿ ರಸ್ತೆ ಸಂಚಾರದ ಮಾರ್ಗವನ್ನು ಬದಲಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗದ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮ ಸೆಪ್ಟೆಂಬರ್ 28 ರಂದು ನಡೆಯಲಿದೆ, ಸಾರ್ವಜನಿಕ ಸುಗಮ ಸಂಚಾರದಿಂದ ಸೆಪ್ಟೆಂಬರ್ 28 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಗಳವರೆಗೆ ನಗರದ ಮುಖ್ಯರಸ್ತೆ ಮತ್ತು ಇತರ ರಸ್ತೆಗಳಲ್ಲಿ ಸಂಚರಿಸುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.
ವಿಸರ್ಜನಾ ಮೆರವಣಿಗೆಯು ಪ್ರಮುಖ ರಸ್ತೆಯಾದ ಬಿ.ಡಿ.ರಸ್ತೆಯಲ್ಲಿ ಸಾಗಿ ಹೊಳಲ್ಕೆರೆ ರಸ್ತೆ ಮುಖಾಂತರ ಸಾಗಲಿದೆ, ಈ ವಿಸರ್ಜನಾ ಮೆರವಣಿಗೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ, ಸುಗಮ ಸಂಚಾರದ ಹಿತದೃಷ್ಟಿಯಿಂದ ಚಿತ್ರದುರ್ಗದಲ್ಲಿ ಸಂಚರಿಸುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವ ಆದೇಶ.
ಮಾರ್ಗ ಬದಲಾವಣೆ ವಿವರ : ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್‌ನಿಂದ ಮಹಾತ್ಮ ಗಾಂಧಿ ವೃತ್ತ, ಹೊಳಲ್ಕೆರೆ ಮಾರ್ಗದ ಕಣಿವೆ ಕ್ರಾಸ್‌ವರೆಗೆ ಎಲ್ಲಾ ಮಾದರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಬೆಂಗಳೂರು, ಚಳ್ಳಕರೆ, ಹೊಸಪೇಟೆ, ದಾವಣಗೆರೆ, ಶಿವಮೊಗ್ಗ ಮತ್ತು ಭೀಮಸಮುದ್ರ ಕಡೆಯಿಂದ ಬರುವ ಎಲ್ಲಾ ಮಾದರಿಯ ಲಘು ಮತ್ತು ಭಾರಿ ವಾಹನಗಳು ಮತ್ತು ಖಾಸಗಿ ಮತ್ತು ಕೆಎಸ್ಆರ್‌ಟಿಸಿ ಬಸ್ಸುಗಳು ಎನ್.ಹೆಚ್-48 ರಸ್ತೆಯ ಮುಖಾಂತರ ನಗರದ ಮೆದೇಹಳ್ಳಿ ಮತ್ತು ಜೆಎಂಐಟಿ ವೃತ್ತದ ಮುಖಾಂತರ ನಗರಕ್ಕೆ ಬಂದು ಅದೇ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾ ರೆ.