ರಾಯಚೂರು : ಜಿಲ್ಲೆಯ ಸಾತ್ ಮೈಲ್ ಕ್ರಾಸ್ ಬಳಿ ಅಕ್ರಮ ಮರಳು ಸಾಗಿಸುತ್ತಿದ್ದ ಆರು ಲಾರಿಗಳನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ.
ರಾಯಚೂರು ಎಸ್ಪಿ ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ಶೋಧ ನಡೆಸಿ ಮರಳು ಸಾಗಿಸುತ್ತಿದ್ದ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ರಾಯಚೂರಿನಿಂದ ಬೀದರ್ ಕಡೆಗೆ ತೆರಳುತ್ತಿದ್ದ ಲಾರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅಕ್ರಮವಾಗಿ ಓವರ್ ಲೋಡ್ ಮಾಡಿ ಮರಳು ಸಾಗಿಸುತ್ತಿದ್ದ 6 ಲಾರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೀದರ್‌ಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಸಂದರ್ಭದಲ್ಲಿ ಸ್ಯಾಟ್ ಮೈಲ್ ಬಳಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕುರಿತು ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.