ಚಿತ್ರದುರ್ಗ : ವಿದ್ಯಾರ್ಥಿಗಳು, ಯುವಕರು ಹಿರಿಯ ನಾಗರೀಕರ ಜೀವನ ಅನುಭವದ ಪಾಠಗಳನ್ನು ತಮ್ಮ ಜೀವನದಲ್ಲಿ ರೂಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಉಪ ವಿಭಾಗಾಧಿಕಾರಿ ಎಂ ಕಾರ್ತಿಕ್ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ತ.ರಾ.ಸು ರಂಗಮAದಿರದಲ್ಲಿ ಆಯೋಜಿಸಲಾಗಿದ್ದ, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ಜೀವಿಗಳಿಗೆ ಆರೋಗ್ಯ ಮತ್ತು ಬೆಂಬಲ ಸುವ್ಯವಸ್ಥೆಗಳನ್ನು ಸದೃಢವಾಗಿ ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮಕ್ಕಳು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಹಾಗೂ ಮಾನಸಿಕವಾಗಿ, ದೈಹಿಕವಾಗಿ ತೊಂದರೆಗಳು ನೀಡುತ್ತಿದ್ದರೆ ಆತಂಕಬೇಡ, ಉಪವಿಭಾಗಾಧಿಕಾರಿಗಳ ಹಂತದಲ್ಲಿ ಹಿರಿಯ ನಾಗರಿಕರ ಕಾಯ್ದೆಯಡಿ ದಾವೆ ಹೂಡಿ ಸಮಸ್ಯೆ ಪರಿಹರಿಸಿಕೊಳ್ಳಬಹುದು. ಲಾಲನೆ- ಪಾಲನೆ ಮಾಡಿ ಸರ್ವಸ್ವವನ್ನು ಧಾರೆ ಎರೆದ ಪೋಷಕರ ಬಗ್ಗೆ ಮಕ್ಕಳು ಕಾಳಜಿ ವಹಿಸದರಿರುವುದು ಬೇಸರದ ಸಂಗತಿ ಎಂದು ಉಪವಿಭಾಗಧಿಕಾರಿ ಎಂ.ಕಾರ್ತಿಕ್ ಮರುಕ ವ್ಯಕ್ತಪಡಿಸಿದರು.
ನಿವೃತ್ತ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ರಂಗಪ್ಪರೆಡ್ಡಿ ಮಾತನಾಡಿ, ಹಿರಿಯ ನಾಗರಿಕರಿಗಾಗಿ ಸರ್ಕಾರವು ಮತ್ತಷ್ಟು ಯೋಜನೆಗಳನ್ನು ರೂಪಿಸಬೇಕು. ಇಂದಿನ ಯುವ ಪೀಳಿಗೆ ಹಿರಿಯರ ಬಗ್ಗೆ ಗೌರವಯುತವಾದ ಮನೋಭಾವ ಹೊಂದಿರಬೇಕು. ಸರ್ಕಾರಿ ಕಚೇರಿಗಳಲ್ಲಿ ಹಿರಿಯ ನಾಗರಿಕರನ್ನು ಆತ್ಮೀಯತೆಯಿಂದ ಕಾಣಬೇಕು ಎಂದು ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಹಿರಿಯ ನಾಗರೀಕರು ತಮ್ಮ ಕುಟುಂಬ, ಸಮಾಜ, ಸಮುದಾಯಕ್ಕೆ ನೀಡಿದ ಕೊಡುಗೆಗಳ ಪ್ರತೀಕವಾಗಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ್ನನು 1991 ರಿಂದ ಆಚರಿಸಲಾಗುತ್ತಿದೆ. ವಯಸ್ಸಾದಂತೆ ದೈಹಿಕ, ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ತಮ್ಮ ಜೀವನಕ್ಕೆ ಧಕ್ಕೆಯಾಗದಂತೆ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣದ ಜೊತೆಗೆ ಉತ್ತಮವಾದ ಸಂಸ್ಕಾರವನ್ನು ರೂಢಿಸಿದರೆ ಮುಂದಿನ ಜೀವನ ಸುಖಕರವಾಗುವುದು ಎಂದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಹಿರಿಯ ನಾಗರೀಕರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಮತ್ತು ಪಾರಿತೋಷಕಗಳನ್ನು ನೀಡಿ ಗೌರವಿಸಲಾಯಿತು.
ವಿಕಲಚೇನರ ಹಾಗೂ ಹಿರಯ ನಾಗರೀಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಡಿ.ಸಿ.ಸೋಮಶೇಖರಯ್ಯ ಸ್ವಾಗತಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಂದಿಸಿದರು. ಮೂರ್ತಿ ಹಾಗೂ ತಂಡದವರು ಗೀತಗಾಯನ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ರವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ವಿಜಯ್ ಕುಮಾರ್, ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್.ಸುಧಾ ಹಾಗೂ ಹಿರಿಯ ನಾಗರೀಕರು, ವಿಶೇಷ ಚೇತನರು ಉಪಸ್ಥಿತರಿದ್ದರು.