Breaking
Sun. Jan 12th, 2025

ಗಾಂಧಿ ತತ್ವಗಳನ್ನು ಅಳವಡಿಸಿಕೊಂಡು ಪ್ರೀತಿ-ವಿಶ್ವಾಸದಿಂದ ಬಾಳೋಣ : ಮಧು ಬಂಗಾರಪ್ಪ….!

ಶಿವಮೊಗ್ಗ, ಅಕ್ಟೋಬರ್ 02 : ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ ಸ್ವಾತಂತ್ರö್ಯ ಲಭಿಸಿದ್ದು, ಅದನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು ಹಾಗೂ ಪ್ರೀತಿ-ವಿಶ್ವಾಸದಿಂದ ಬಾಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹೇಳಿದರು.

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ 155 ನೇ ಗಾಂಧಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 ನಮಗೆ ಸ್ವಾತಂತ್ರ‍್ಯ ಸುಲಭದಿಂದ ಬಂದಿಲ್ಲ. ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದಿಂದ ಲಭಿಸಿದ್ದು. ಗಾಂಧೀಜಿಯವರು ತಮ್ಮ ಜೀವನಪೂರ್ತಿ ಶಾಂತಿ, ಸಮಾನತೆ, ಸೌಹಾರ್ಧತೆ ಸ್ಥಾಪಿಸಲು ಹೋರಾಡಿದರು. ಅದನ್ನು ನಾವು ಉಳಿಸಿಕೊಂಡು ಹೋಗಬೇಕು. ಸುಮಾರು 84 ದೇಶಗಳು ಗಾಂಧೀಜಿಯವರ ಪ್ರತಿಮೆಯನ್ನು ಹೊಂದಿವೆ. ಸಾಮಾನ್ಯವಾಗಿ ಎಲ್ಲರೂ ಅವರ ಚಿಂತನೆಗೆ ಮಾರು ಹೋಗಿದ್ದಾರೆ.

 ಮಕ್ಕಳು ಈ ದೇಶದ ಭವಿಷ್ಯ. ಅವರಿಗೆ ದೇಶವನ್ನು ಬದಲಿಸುವ ಶಕ್ತಿ ಇದೆ. ಗನ್‌ಗಿಂತ ಪೆನ್ ಅತ್ಯಂತ ಬಲಿಷ್ಟವಾಗಿದ್ದು, ವಿದ್ಯಾವಂತರಾಗಿ ದೇಶದ ಒಳಿತಿಗಾಗಿ ಮುಂದೆ ಬರಬೇಕು ಎಂದರು.

 ಇಡೀ ದೇಶ ಒಂದೇ ವೇದಿಕೆ. ನಾವೆಲ್ಲ ಒಂದೇ ತಾಯಿ ಮಕ್ಕಳು. ಒಂದೇ ವೇದಿಕೆಯಲ್ಲಿ ಎಲ್ಲ ಧರ್ಮದವರು ಸೇರಲು ಕಾರಣ ಗಾಂಧೀಜಿ ಮತ್ತು ಅಂಬೇಡ್ಕರ್‌ರAತಹವರು. ನಾವೆಲ್ಲ ನಮ್ಮ ಸಂವಿಧಾನವನ್ನು ತಿಳಿಯಬೇಕು. ನಾವೆಲ್ಲ ಒಂದೇ ಎಂಬ ಭಾವನೆ ಬರಬೇಕು. ಅದೇ ಉದ್ದೇಶದಿಂದ ಸೆ. 5 ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನ ಪೀಠಿಕೆ ಓದಲು ಆದೇಶಿಸಲಾಗಿದೆ. ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನ ಪೀಠಿಕೆ ಓದುವ ಮೂಲಕ ಗೌರವ ತೋರಬೇಕು. ನಾವೆಲ್ಲ ಒಂದೇ ಎಂಬ ಭಾವನೆ ಮೂಡಬೇಕು ಎಂದರು.

 ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ವಿಶ್ವದಲ್ಲೇ ಶಾಂತಿ ನೆಲೆಸಲು ಗಾಂಧೀಜಿಯವರು ಶಾಂತಿ ಸಂದೇಶ ಸಾರಿದ್ದಾರೆ. ಸ್ವದೇಶಿ ವಸ್ತುಗಳ ಬಳಕೆ, ಸ್ವಾವಲಂಬನೆ ಸೂತ್ರ, ಸ್ವಚ್ಚ ಭಾರತ ಸಂಕಲ್ಪದAತಹ ಅವರು ಹಾಕಿ ಕೊಟ್ಟ ಹಾದಿಯಲ್ಲಿ ನಾವೆಲ್ಲ ಸಾಗಬೇಕು. ಸಮಾಜವನ್ನು ಶ್ರೀಮಂತಗೊಳಿಸಬೇಕು ಎಂದ ಅವರು ನಮ್ಮ ತಂದೆ, ತಾಯಿ ಹೆಸರಿನಲ್ಲಿ, ಹುಟ್ಟಿದ ದಿನಗಳಂದು ಪ್ರತಿಯೊಬ್ಬರೂ ಒಂದೊAದು ಗಿಡ ನೆಟ್ಟು ಬೆಳೆಸುವ ಸಂಕಲ್ಪವನ್ನು ಇಂದು ಮಾಡೋಣ ಎಂದು ತಿಳಿಸಿದರು.

 ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಗಾಂಧೀಜಿಯವರ ಜೀವನ ಕಥೆ ಓದಿ, ತಿಳಿದು ಅವರ ತತ್ವಗಳನ್ನು ನಾವು ಅಳವಡಿಸಿಕೊಳ್ಳಬೇಕು. ಸತ್ಯ ಮತ್ತು ಅಹಿಂಸೆಯ ಮಾರ್ಗದಲ್ಲಿ ಅವರಉ ನಡೆದರು. ಶಾಂತಿ ಮತ್ತು ಸ್ವಾತಂತ್ರ‍್ಯದ ಬದುಕಿಗೆ ಗಾಂಧಿ ಮತ್ತು ಅಂಬೇಡ್ಕರ್‌ರAತಹ ಮಹಾನ್ ವ್ಯಕ್ತಿಗಳು ಕಾರಣ ಎಂದರು.

 ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ದೇಶ ಹೇಗಿರಬೇಕು ಎಂದು ಗಾಂಧೀಜಿ ಮೊದಲೇ ತಿಳಿಸಿದ್ದಾರೆ. ಶಾಂತಿ ಮತ್ತು ಸೌಹಾರ್ಧತೆಯಿಂದ ಬದುಕಲು ಹೇಳಿಕೊಟ್ಟಿದ್ದಾರೆ. ಅವರು ತಮ್ಮ ನಡವಳಿಕೆಯಿಂದ ಮಹಾತ್ಮರಾಗಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿಯವರು ಕೂಡ ಮಹಾನ್ ವ್ಯಕ್ತಿಯಾಗಿದ್ದು ಪ್ರಾಮಾಣಿಕತೆಗೆ ಇನ್ನೊಂದು ಹೆಸರಾಗಿದ್ದಾರೆ. ಗಾಂಧೀಜಿಯವರು ತಮ್ಮ ಜೀವನದ ಉದ್ದಕ್ಕೂ ರಾಮನ ಭಜನೆಯನ್ನು ಮಾಡಿದ್ದರೆಂದು ಸ್ಮರಿಸಿದ ಅವರು ನಾವೆಲ್ಲ ದೇಶಭಕ್ತರಾಗೋಣ. ಸ್ವಚ್ಚ ಭಾರತ ನಿರ್ಮಾಣ ಮಾಡೋಣ ಎಂದು ಕರೆ ನೀಡಿದರು. 

 ಸ.ಪ್ರ.ದ ಕಾಲೇಜಿನ ಉಪನ್ಯಾಸಕ ಅಣ್ಣಪ್ಪ ಮಳಮಠ್ ಗಾಂಧಿ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಗಾಂಧಿ ನಮ್ಮಂತೆ ಸಾಮಾನ್ಯವಾಗಿ ಬದುಕಿದವರು. ಅವರನ್ನು ಆರಾಧನಾ ನೆಲೆಯಿಂದ ನೋಡದೆ ಒಬ್ಬ ಮನುಷ್ಯನಾಗಿ ನೋಡಿದಾಗ ಹೆಚ್ಚು ಅರ್ಥ ಆಗುತ್ತಾರೆ. ಸತ್ಯಕ್ಕಾಗಿ ಬದುಕಿದವರು. ಕಟ್ಟಕಡೆಯ ವ್ಯಕ್ತಿಗೂ ಸಮಾನತೆ ಬೇಕೆಂದು, ಅಸಮಾನತೆ ತೊಡೆದು ಹಾಕಲು ಹೋರಾಡಿದವರು. ಯಾವುದು ಸತ್ಯದ ಪರ, ಅಹಿಂಸೆಯ ಪರ, ಪ್ರೀತಿಯ ಪರವಾಗಿರುತ್ತದೋ ಅದನ್ನು ನಾವು ಒಪ್ಪಿಕೊಳ್ಳಬೇಕೆಂದು ತಿಳಿಸಿದವರು.

 ಸತ್ಯ ಸಾಗರದಂತೆ ಮತ್ತು ಪ್ರೀತಿ ಪರ್ವತದಂತೆ. ಸಾಗರ ಮತ್ತು ಪರ್ವತದಲ್ಲಿ ಅಗಾಧ ಸಹನೆ ಇರುತ್ತದೆ. ಎಲ್ಲರನ್ನೂ ಒಂದೇ ರೀತಿ ನೋಡುವುದು ಕರುಣೆ ಎಂದು ತಿಳಿಸಿದವರು ಗಾಂಧೀಜಿ. ಜಗತ್ತು ಸುಂದರವಾಗಿ ಕಾಣಲು, ನಾವು ಮನುಷ್ಯರಾಗಿ ಬಾಳಲು, ನಮ್ಮ ಬದುಕು ಹಸನಾಗಲು ಗಾಂಧಿ ನಮಗೆ ಬೇಕು. ಸಂಕುಚಿತ ಮನೋಭಾವ ದೂರ ಮಾಡದಿದ್ದರೆ ನಾವು ಗಾಂಧಿಯನ್ನು ತಲುಪಲು ಸಾಧ್ಯವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಭಾರತದ ಸಂವಿಧಾನದಲ್ಲಿ ಗಾಂಧಿಯವರ ಆಶಯಗಳಿವೆ. 

 ಕಾರ್ಯಕ್ರಮದಲ್ಲಿ ಸರ್ವಧರ್ಮ ಪಠನೆ ಮಾಡಲಾಯಿತು. ಭಗವದ್ಗೀತೆ ಪಠನೆಯನ್ನು ಕು. ಐಶೂಬಾಯಿ ನೆರವೇರಿಸಿದರು. ಕುರಾನ್ ಪಠನೆಯನ್ನು ಮೌಲ್ವಿ ಲತೀಫ್ ಸಾಬ್ ಮತ್ತು ಸ್ಟ್ಯಾನ್ಲಿ ಡಿಸೋಝ ಬೈಬಲ್ ಪಠನ ಮಾಡಿದರು. 

 ಗಾಂಧಿ ಜಯಂತಿ ಪ್ರಯುಕ್ತ ಫ್ರೌಢಶಾಲೆ, ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ನೀಡಲಾಯಿತು.

 ಜಿ.ಪಂ.ಸಿಇಓ ಎನ್.ಹೇಮಂತ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಾರುತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Related Post

Leave a Reply

Your email address will not be published. Required fields are marked *