ಹಾಸನ : ಕರ್ನಾಟಕ ಲೋಕ ಸೇವಾ ಆಯೋಗವು ಡಿ. 29 ರಂದು ಕೆ.ಎ.ಎಸ್ ಪೂರ್ವಭಾವಿ ಮರು ಪರೀಕ್ಷೆ ನಿಗದಿಪಡಿಸಿದ್ದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್‌ನಲ್ಲಿ ನುರಿತ ವಿಷಯ ತಜ್ಞರಿಂದ ಆನ್‌ಲೈನ್ ಮತ್ತು ಆಫ್‌ಲೈನ್ ತರಬೇತಿ ಅತೀ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಕೃಷಿಕ್ ಸರ್ವೋದಯ ಫೌಂಡೇಶನ್ ಕಾರ್ಯದರ್ಶಿ ತಿಳಿಸಿದ್ದಾರೆ.
ಸೂಕ್ತ ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಮೂಲಕ ರಿಯಾಯಿತಿ ಶುಲ್ಕದಲ್ಲಿ ತರಬೇತಿ ನೀಡಲಾಗುವುದು. ತರಬೇತಿಗೆ ಸೇರುವ ವಿದ್ಯಾರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ತಯಾರಿಗಾಗಿ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ಕೇಂದ್ರ ಕಚೇರಿಯಿಂದ ಪ್ರಕಟಿಸಿರುವ ಉತ್ತಮ ಗುಣಮಟ್ಟದ ಪಠ್ಯಸಾಮಗ್ರಿಯನ್ನು ಉಚಿತವಾಗಿ ನೀಡಲಾಗುವುದು. ಆಸಕ್ತರು ಇದೇ ತಿಂಗಳ 11ನೇ ತಾರೀಖಿನೊಳಗೆ ದೂರವಾಣಿ ಸಂಖ್ಯೆ 8660217739 ಸಂಪರ್ಕಿಸಿ ನೊಂದಣಿ ಮಾಡಿಕೊಳ್ಳಬಹುದು ಎಂದು ಕೃಷಿಕ್ ಸರ್ವೋದಯ ಫೌಂಡೇಶನ್ ಕಾರ್ಯದರ್ಶಿ ತಿಳಿಸಿದ್ದಾರೆ.