Breaking
Mon. Dec 23rd, 2024

ದಾವಣಗೆರೆ ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತ, ಪುನಶ್ಚತಿತ ನಿಲ್ದಾಣ ಸುಸಜ್ಜಿತ, ಹಲವು ಸೌಲಭ್ಯಗಳನ್ನು ಹೊಂದಿದೆ ; ಡಾ; ಶಾಸಕರಾದ ಶಾಮನೂರು ಶಿವಶಂಕರಪ್ಪ

ದಾವಣಗೆರೆ : ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದೆ ಈ ಬಸ್ ನಿಲ್ದಾಣವು ಸುಸಜ್ಜಿತ ಮತ್ತು ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ಅವರು.

ಪಿ.ಬಿ ರಸ್ತೆಯಲ್ಲಿನ ಡಾ. ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭವನ್ನು ಉದ್ಘಾಟಿಸಿದರು. ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ ಯೋಜನೆಡಿ 20 ಕೋಟಿ ವೆಚ್ಚದಲ್ಲಿ ಸಿದ್ದಗೊಂಡು, ಸಾರ್ವಜನಿಕರ ಬಳಕೆಗೆ ಮುಕ್ತವಾಗಿರುವ ಈ ಬಸ್ ನಿಲ್ದಾಣವು ಸುಸಜ್ಜಿತವಾಗಿದ್ದು, ಹತ್ತಾರು ಸೌಲಭ್ಯಗಳನ್ನು ಹೊಂದಿದೆ. 84 ಮಳಿಗೆ ಹಾಗೂ ಏಕಕಾಲಕ್ಕೆ 16 ಬಸ್ ನಿಲ್ಲಿಸಲಾಗಿದೆ. 200 ದ್ವೀಚಕ್ರ ವಾಹನ ನಿಲುಗಡೆಗೆ ಕೂಡ ವ್ಯವಸ್ಥೆ ಮಾಡಲಾಗಿತ್ತು. ಈ ಸುಸಜ್ಜಿತ ಬಸ್ ನಿಲ್ದಾಣವನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು.

ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್‌ ಕೆಶೆಟ್ಟಿ, ಉಪಮೇಯರ್‌ ಸೋಗಿ ಶಾಂತಕುಮಾರ್‌, ಖಾಸಗಿ ಬಸ್‌ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ, ಖಾಸಗಿ ಬಸ್‌ ಏಜೆಂಟರ ಸಂಘದ ಅಧ್ಯಕ್ಷರಾದ ಉಮೇಶ್‌ರಾವ್‌ ಸಾಳಂಕಿ, ಹಾಗೂ ದಾವಣಗೆರೆ ಜಿಲ್ಲಾ ಖಾಸಗಿ ಬಸ್‌ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್‌ ಏಜೆಂಟ್‌ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *