ಬಳ್ಳಾರಿ : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯು ಇದೇ ಅ.19 ಮತ್ತು 20 ರಂದು ಜಿಲ್ಲೆಯಾದ್ಯಂತ ಸಂಚರಿಸಲಿದ್ದು, ರಥಯಾತ್ರೆಗೆ ಗೌರಯುತವಾಗಿ ಸ್ವಾಗತ ಮತ್ತು ಬೀಳ್ಕೊಡುಗೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ಪ್ರಮೋದ್ ಅವರು ಹೇಳಿದರು.
ಜಿಲ್ಲೆಯಲ್ಲಿ ‘ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆ’ಯ ಸಂಚಾರ ಹಿನ್ನಲೆಯಲ್ಲಿ ಈ ಕುರಿತು ಅಗತ್ಯ ಸಿದ್ಧತೆಗಾಗಿ ಮಂಗಳವಾರ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅ.19 ಮತ್ತು 20 ರಂದು ಸಿರುಗುಪ್ಪ ತಾಲ್ಲೂಕಿಗೆ ಆಗಮಿಸಲಿದೆ. ಕನ್ನಡ ಜ್ಯೋತಿ ಹೊತ್ತ ಕನ್ನಡ ರಥವನ್ನು ಅಲ್ಲಿನ ತಾಲ್ಲೂಕು ಆಡಳಿತ ಸ್ವಾಗತಿಸಲಾಗುವುದು. ರಥವು ಸಿರುಗುಪ್ಪದಿಂದ ಕುರುಗೋಡು, ಬಳ್ಳಾರಿ, ಸಂಡೂರು, ಕಂಪ್ಲಿ ತಾಲ್ಲೂಕು ಮೂಲಕ ವಿಜಯನಗರ ಜಿಲ್ಲೆಗೆ ಸಂಚರಿಸಲಿದೆ ಎಂದು ಅವರು ತಿಳಿಸಿದರು.
ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯು ಯಶಸ್ವಿಯಾಗಿ ಜರುಗಬೇಕು. ರಥಯಾತ್ರೆ ಆಗಮಿಸಿದಾಗ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಕನ್ನಡಪರ, ರೈತ, ಕಾರ್ಮಿಕ ಸಂಘಟನೆಗಳು, ವಿದ್ಯಾ ಸಂಸ್ಥೆಗಳು, ಎನ್.ಸಿ.ಸಿ., ಎನ್.ಎಸ್.ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಸ್ತಿçÃ-ಶಕ್ತಿ ಸಂಘಗಳು ಸೇರಿದಂತೆ ಇತರ ಸಂಘ-ಸAಸ್ಥೆಗಳು ಹಾಗೂ ಸಾರ್ವಜನಿಕರನ್ನು ಜೊತೆಗೂಡಿಸಿಕೊಂಡು ಕನ್ನಡ ರಥಕ್ಕೆ ಗೌರವಯುತವಾಗಿ ಸ್ವಾಗತಿಸಬೇಕು. ಆಯಾ ತಾಲ್ಲೂಕುಗಳಲ್ಲಿ ಸಂಚರಿಸುವ ವ್ಯವಸ್ಥೆ ಮಾಡಬೇಕು. ನಂತರ ತಾಲ್ಲೂಕಿನ ಗಡಿ ಭಾಗಗಳಲ್ಲಿ ಬೀಳ್ಕೊಡಬೇಕು ಎಂದು ಎಸಿ ಪ್ರಮೋದ್ ಅವರು ಹೇಳಿದರು.
ಕನ್ನಡ ರಥಯಾತ್ರೆ ಸಂಚರಿಸುವ ವೇಳೆಯಲ್ಲಿ ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಯಾವುದೇ ಅಡ್ಡಿಯಿಲ್ಲದಂತೆ ಸಂಚರಿಸಲು ಸೂಕ್ತ ವ್ಯವಸ್ಥೆ ಮಾಡಬೇಕು. ರಥಯಾತ್ರೆಯು ಆಯಾ ತಾಲ್ಲೂಕುಗಳಲ್ಲಿ ಸಂಚರಿಸುವಾಗ ಮತ್ತು ವಾಸ್ತವ್ಯದ ಸ್ಥಳಗಳಲ್ಲಿ ಸೂಕ್ತ ಪೋಲಿಸ್ ಭದ್ರತೆಯನ್ನು ಒದಗಿಸಬೇಕು ಎಂದು ಅವರು ತಿಳಿಸಿದರು.
ತಾಲೂಕು ಆಡಳಿತ, ಜಿಲ್ಲಾ ಸಾಹಿತ್ಯ ಪರಿಷತ್ತು ಸೇರಿದಂತೆ ಆಯಾ ತಾಲ್ಲೂಕಿನ ತಾಲ್ಲೂಕು ಮಟ್ಟದ ಅಧಿಕಾರಿಗಳು ಕನ್ನಡ ಪರ ಸಂಘಟನೆಗಳು, ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಹಾಗೂ ವಿವಿಧ ಸಂಘಟನೆಗಳ ಪೂರ್ವಭಾವಿ ಸಭೆ ಏರ್ಪಡಿಸುವ ಮೂಲಕ ಕನ್ನಡ ಜ್ಯೋತಿ ರಥಯಾತ್ರೆಯನ್ನು ಯಶಸ್ವಿಯಾಗಿ ಆಯೋಜಿಸಬೇಕು ಮತ್ತು ಎಲ್ಲರೊಂದಿಗೆ ಸೂಕ್ತ ಸಮನ್ವಯ ಸಾಧಿಸಿ, ರಥಯಾತ್ರೆಯನ್ನು ಯಶಸ್ವಿಗೊಳಿಸಲು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ‘ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆ’ಯ ಸಂಚಾರ ಯಶಸ್ಸಿಗೆ ತಮ್ಮ ಸಲಹೆ-ಸೂಚನೆ ನೀಡಿದರು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರರಾದ ಗೌಸಿಯ ಅವರು ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮತ್ತೀತರರು ಉಪಸ್ಥಿತರಿದ್ದರು.