ಚಿತ್ರದುರ್ಗ : ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆಯ ಕರ್ನಾಟಕ ವಿಧಾನಮಂಡಲ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಇದೇ ಅ.19 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದೆ.
ದಾವಣಗೆರೆ ಜಿಲ್ಲೆಯಿಂದ ಚಿತ್ರದುರ್ಗ ನಗರಕ್ಕೆ ಆಗಮಿಸುವ ಸಮಿತಿ, ಅಂದು ಬೆಳಿಗ್ಗೆ 10ಕ್ಕೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯ ಅಭಿವೃದ್ಧಿಗಾಗಿ, ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಿದೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಜನರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಮನವಿಗಳನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಬಹುದಾಗಿದೆ. ಜಿಲ್ಲಾಧಿಕಾರಿಗಳು ಮನವಿಗಳನ್ನು ಅ.19 ರಂದು ಜರುಗುವ ಪ್ರಗತಿ ಪರಿಶೀಲನೆ ದಿನದಂದು ಸಮಿತಿ ಅಧ್ಯಕ್ಷರಿಗೆ ಸಲ್ಲಿಸುವರು.
ಸದನ ಸಮಿತಿಯಲ್ಲಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ರಾಜ್ಯದ ವಿವಿಧ ವಿಧಾನ ಸಭೆ 20 ಶಾಸಕರು ಇದ್ದಾರೆ ಎಂದು ವಿಧಾನ ಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.