ಶಿವಮೊಗ್ಗ, : ಮೈತ್ರಿ ಶಿಕ್ಷಣ ಮಹಾವಿದ್ಯಾಲಯ, ಮೈತ್ರಿ ನರ್ಸಿಂಗ್ ಮಹಾವಿದ್ಯಾಲಯ ವತಿಯಿಂದ ಬುಧವಾರ ಮೈತ್ರಿ ಕಾಲೇಜಿನ ಆವರಣದಲ್ಲಿ ತಂಬಾಕು ಮುಕ್ತ ಯುವ ಭಾರತ 2.0 ಕಾರ್ಯಕ್ರಮದಡಿ ತಂಬಾಕು ಸೇವನೆಗಳಿಂದ ಉಂಟಾಗುವ ದುಷ್ಪರಿಣಾಮಗಳು, ಕೋಟ್ಪಾ ಕಾಯ್ದೆ ಹಾಗೂ ತಂಬಾಕು ವ್ಯಸನ ಮುಕ್ತಿ ಕೇಂದ್ರದ ಕುರಿತು ಪ್ರಶಿಕ್ಷಣಾರ್ಥಿಗಳಿಗೆ ಅರಿವು ಕಾರ್ಯಕ್ರಮವನ್ನು ನಡೆಸಲಾಯಿತು ಹಾಗೂ ಈ ವೇಳೆ ಕಾಲೇಜಿನಲ್ಲಿ ತಂಬಾಕು ನಿಯಂತ್ರಣ ಸಮಿತಿಗಳನ್ನು ರಚಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈತ್ರಿ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯರಾದ
ಡಾ. ಶಾಲಿನಿ.ಜೆ ವಹಿಸಿದ್ದರು. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್, ಆರೋಗ್ಯ ಇಲಾಖೆ ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.