ರಾಯಚೂರು, ಅ.13 : ರಾಯಚೂರು ತಾಲೂಕು ಬಿ.ಯದ್ಲಾಪುರ ಗ್ರಾಮದಲ್ಲಿ ಬಟ್ಟೆ ಒಗೆಯುತ್ತಿದ್ದ ವೇಳೆ ಕಾಲುವೆಯಲ್ಲಿ ಮುಳುಗಿ ತಾಯಿ ಮಗಳು ಮೃತಪಟ್ಟಿದ್ದಾರೆ.
ತಾಯಿ ಸುಜಾತ (27) ಹಾಗೂ ಮಗಳು ಶ್ರಾವಣಿ (10) ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ತಾಯಿಯ ಮೃತದೇಹ ಪತ್ತೆ ಮಾಡಿದ್ದಾರೆ.
ಸದ್ಯ ಶ್ರಾವಣಿ ಮಗಳ ಹುಡುಕಾಟ ನಡೆಯುತ್ತಿದೆ. ಪ್ರತಿ ದಿನದಂತೆ ಎಡದಂಡೆಯ ತುಂಗಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಅವಘಡ ಸಂಭವಿಸಿದೆ. ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.