ಚಿತ್ರದುರ್ಗದ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ನಮ್ಮ ಎಕ್ಸ್ಪರ್ಟ್ಸ್ ಪಿ.ಯು ಕಾಲೇಜು ಸಹಯೋಗದಲ್ಲಿ ಇದೇ ಅ.16ರಂದು ಬೆಳಿಗ್ಗೆ 10ಕ್ಕೆ ನಗರದ ಒನಕೆ ಓಬವ್ವ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಜೂಡೋ ಕ್ರೀಡಾಕೂಟ ಆಯೋಜಿಸಲಾಗಿದೆ.
ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕ್ರೀಡಾಕೂಟ ಉದ್ಘಾಟಿಸುವರು. ಸಂಸದ ಗೋವಿಂದ ಎಂ ಕಾರಜೋಳ ಘನ ಉಪಸ್ಥಿತಿ ವಹಿಸುವರು. ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚAದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷೆ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್. ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕಿ ಬಿ.ಸಿಂಧೂ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಆರ್.ಪುಟ್ಟಸ್ವಾಮಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಸಹಾಯಕ ನಿರ್ದೇಶಕ (ಕ್ರೀಡೆ) ಗುಬ್ಬಿಗೂಡು ರಮೇಶ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ಎಂ ನೆಲವಿಗಿ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್.ದೇವೇಂದ್ರಪ್ಪ, ಕಾರ್ಯದರ್ಶಿ ಆರ್.ಮುಸ್ತಾಫ್, ಖಜಾಂಚಿ ಜೆ.ರಂಗಸ್ವಾಮಿ, ಉಪನ್ಯಾಸಕ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶ್, ಜೂಡೋ ಹಿರಿಯ ತರಬೇತುದಾರೆ ಡಾ.ಎಂ.ಎನ್.ತ್ರಿವೇಣಿ, ಕ್ರೀಡಾ ಸಂಯೋಜಕ ಎ.ಎಸ್. ರಂಗಪ್ಪ, ಐಡಿಯಲ್ ಎಜುಕೇಷನ್ ಸೊಸೈಟಿ ಹಾಗೂ ನಮ್ಮ ಎಕ್ಸ್ಪರ್ಟ್ಸ್ ಪಿ.ಯು ಕಾಲೇಜು ಪ್ರಾಂಶುಪಾಲ ಪಿ.ಅರುಣ್ ಕುಮಾರ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.