ಬಳ್ಳಾರಿ,ಅ.17 : ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಅಂಗವಾಗಿ ನಗರದ ನಲ್ಲಚೆರವು ಪ್ರದೇಶದ ವಾಲ್ಮೀಕಿ ಭವನದ ಆವರಣದಲ್ಲಿನ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಜಿಲ್ಲಾಡಳಿತ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪುಷ್ಪನಮನ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್.ಕೆ ಶಂಕಿನದಾಸರ ಸೇರಿದಂತೆ ಸಮಾಜದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.