ಹಾಸನ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಕಾರ್ಯಕ್ರಮ ಅ.23 ರಂದು ಬೆಳಿಗ್ಗೆ 11 ಗಂಟೆಗೆ ಹಾಸನಾಂಬ ಕಲಾಭವನದಲ್ಲಿ ಆಯೋಜಿಸಲಾಗಿದೆ.
ಮಾಜಿ ಪ್ರಧಾನಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಗೌರವಾನ್ವಿತ ಉಪಸ್ಧಿತಿ ವಹಿಸಲಿರುವರು, ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಗೃಹಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ರವರು ಗೌರವ ಉಪಸ್ಧಿತಿವಹಿಸಲಿದ್ದಾರೆ. ಶಾಸಕರಾದ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದರಾದ ಶ್ರೇಯಸ್ ಎಂ. ಪಟೇಲ್, ವಿಧಾನಸಭೆ ಶಾಸಕರುಗಳಾದ ಹೆಚ್.ಡಿ. ರೇವಣ್ಣ, ಡಾ. ಸಿ.ಎನ್. ಬಾಲಕೃಷ್ಣ, ಎ.ಮಂಜು, ಹೆಚ್.ಕೆ. ಸುರೇಶ್, ಎಸ್. ಮಂಜುನಾಥ (ಸಿಮೆಂಟ್ ಮಂಜು), ವಿಧಾನಪರಿಷತ್ ಸದಸ್ಯರಾದ ಡಾ॥ ಸೂರಜ್ ರೇವಣ್ಣ, ಮಧು ಜಿ.ಮಾದೇಗೌಡ, ಕೆ. ವಿವೇಕಾನಂದ, ನಗರಸಭೆಯ ಅಧ್ಯಕ್ಷರಾದ ಚಂದ್ರೇಗೌಡ ಎಂ, ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಆರ್ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮೊಹಮ್ಮದ್ ಸುಜೀತ ಎಮ್. ಎಸ್, ಮತ್ತಿತರರು ಭಾಗವಹಿಸಲಿರುವರು. ಎ.ವಿ.ಕೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಸೀ.ಚ.ಯತೀಶ್ವರ ಕಾರ್ಯಕ್ರಮ ಕುರಿತು ಉಪನ್ಯಾಸ ನೀಡಲಿರುವರು.
ಅಂದು ಬೆಳಿಗ್ಗೆ 10 ಗಂಟೆಗೆ ಕಿತ್ತೂರು ರಾಣಿ ಚೆನ್ನಮ್ಮರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಹಾಸನಾಂಬ ಕಲಾಕ್ಷೇತ್ರದವರಿಗೆ ಕಲಾ ತಂಡಗಳೊAದಿಗೆ ಮೆರವಣಿಗೆ ಜರುಗಲಿದೆ.