Breaking
Mon. Dec 23rd, 2024

ತಂಬಾಕು ಮುಕ್ತ ಯುವ ಅಭಿಯಾನ 2.0 ಕಾರ್ಯಕ್ರಮಕ್ಕೆ ಚಾಲನೆ….!

ಚಿತ್ರದುರ್ಗ : ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಈಚೆಗೆ ನಗರದ ಎಸ್‍ಆರ್‍ಎಸ್ ಬಿ.ಇಡಿ ಕಾಲೇಜಿನಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ಎಸ್.ಆರ್.ಎಸ್ ಬಿ.ಇಡಿ ಕಾಲೇಜಿನ ಪ್ರಾಂಶುಪಾಲ ಡಾ.ರವಿ, ಯುವ ಜನತೆಯು ಅತೀ ಹೆಚ್ಚಾಗಿ ತಂಬಾಕಿನ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ. ಆದ್ದರಿಂದ ಯುವಕರು ಈ ದುಶ್ಚಟಗಳಿಂದ ಹೊರಬಂದು ತಂಬಾಕು ಮುಕ್ತ ಸಮಾಜವನ್ನು ನಿರ್ಮಾಣ ಮಾಡೋಣ ಎಂದು ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಯುವ ಜನತೆ ದುಶ್ಚಟಗಳಿಂದ ದೂರವಿರಬೇಕು ಹಾಗೂ ಉತ್ತಮ ಜೀವನ ಮತ್ತು ಸಮಾಜವನ್ನು ನಿರ್ಮಿಸಿಕೊಳ್ಳಬೇಕು, ತಂಬಾಕು ನಿಯಂತ್ರಣದಲ್ಲಿ ಯುವಜನತೆಯ ಪಾತ್ರ ಪ್ರಮುಖವಾಗಿದೆ. ಯುವಜನತೆ ಮನಸ್ಸು ಮಾಡಿದರೇ ಅಸಾಧ್ಯವಾದುದು ಯಾವುದು ಇಲ್ಲ, ತಂಬಾಕು ಮುಕ್ತ ಸಮಾಜವನ್ನು ನಿರ್ಮಿಸಲು ಕೈಜೋಡಿಸಬೇಕು ಮತ್ತು ಶ್ರಮಿಸಲು ತಿಳಿಸಿದರು ಮತ್ತು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತರ ಕೆ.ಎಂ.ತಿಪ್ಪೇಸ್ವಾಮಿ, ಕಾಯ್ದೆಯ ಕುರಿತು ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುವಂತಹ ದುಷ್ಪರಿಣಾಮಗಳ ಕುರಿತು ಮತ್ತು ತಂಬಾಕು ವ್ಯಸನ ಮುಕ್ತ ಕೇಂದ್ರ, ಜಿಲ್ಲಾ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದೊರೆಯುವಂತಹ ಉಚಿತ ಆಪ್ತಸಮಾಲೋಚನೆ ಮತ್ತು ನಿಕೋಟಿನ್ ಗಮ್ಸ್ ನೀಡುವ ಬಗ್ಗೆ ಹಾಗೂ ನಗರ ಪ್ರದೇಶಗಳಲ್ಲಿ ಗರ್ಭಿಣಿ ಸ್ತ್ರೀಯರು ಧೂಮಪಾನವನ್ನು ಮಾಡುತ್ತಾರೆ. ಇದರಿಂದಾಗಿ ಮಹಿಳೆಯರಿಗೂ ಮತ್ತು ಮಗುವಿನ ಬೆಳವಣಿಗೆಗೆ ಹಾಗೂ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ ಎಂದು ಸವಿವರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕದ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *