ವಯನಾಡು : ಪ್ರಿಯಾಂಕಾ ಗಾಂಧಿ ಈ ಕ್ಷೇತ್ರದಲ್ಲಿ ಭಾರಿ ಬಹುಮತದಿಂದ ಗೆಲ್ಲುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬಿಜೆಪಿ ನಮ್ಮ ಎದುರಾಳಿ. ಬಿಜೆಪಿಯನ್ನು ಸೋಲಿಸಲು ನಾವು ಎಲ್ಲಾ ಜಾತ್ಯತೀತ ಶಕ್ತಿಗಳು ಮತ್ತು ಮೌಲ್ಯಗಳೊಂದಿಗೆ ಕೈಜೋಡಿಸುತ್ತೇವೆ. ಬಿಜೆಪಿಯನ್ನು ಸೋಲಿಸಿ ದೇಶ ಉಳಿಸುವುದೇ ನಮ್ಮ ಆದ್ಯ ಉದ್ದೇಶ ಎಂದರು.
ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರ ಪ್ರಚಾರದ ಪರಿಣಾಮಕಾರಿತ್ವದ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಖಂಡಿತವಾಗಿಯೂ ಗೆಲ್ಲುತ್ತಾರೆ ಎಂದು ಹೇಳಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಲೋಕಸಭೆ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇದು ಪ್ರಿಯಾಂಕಾ ಗಾಂಧಿಯವರ ಮೊದಲ ಚುನಾವಣಾ ಪ್ರಚಾರವಾಗಿದೆ.