ಹಾಸನ : ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಸ್ವತಂತ್ರ ತಂದು ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಆಯೋಜಿಸಿದ್ದ ಮೆರವಣಿಗೆಗೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.
ಈ ವೇಳೆಯಲ್ಲಿ ಅರಕಲಗೂಡು ದೊಡ್ಡ ಮಠದ ಮಠಾಧೀಶರಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೂಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ತಣ್ಣಿರುಹಳ್ಳ ಮಠಾಧೀಶರಾದ ಶ್ರೀ ವಿಜಯ ಕುಮಾರ್ ಸ್ವಾಮೀಜಿ, ಜವನಹಳ್ಳಿ ಮಠಾಧೀಶರಾದ ಶ್ರೀ ಸಂಗಮೇಶ್ವರ ಸ್ವಾಮೀಜಿ, ಹಾಗೂ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ಜಿಲ್ಲಾ ಅಖಿಲಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾದ ಎನ್. ಪರಮೇಶ್, ತಾಲೂಕು ಅಧ್ಯಕ್ಷರಾದ ಕಟ್ಟಾಯ ಶಿವಕುಮಾರ್, ಶೋಭನ್ ಬಾಬು, ಹೆಚ್.ಎನ್. ನಾಗೇಶ್, ಹೇಮಂತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಪಿ. ತಾರಾನಾಥ್ ಅವರು.