ಬಳ್ಳಾರಿ : ಬ್ರಿಟಿಷರ ವಿರುದ್ಧ ಹೋರಾಡಿದ ಕೆಚ್ಚೆದೆಯ ಸ್ವಾತಂತ್ರö್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಸ್ಪೂರ್ತಿಧಾಯಕ ಮಹಿಳೆಯಾಗಿದ್ದು, ಅನೇಕ ವೀರ ಮಹಿಳೆಯರಿಗೆ ಪ್ರೇರಣೆ ನೀಡಿದ್ದಾರೆ ಎಂದು ಮಹಾನಗರ ಪಾಲಿಕೆ ಮೇಯರ್ ನಂದೀಶ್ ಅವರು ಹೇಳಿದ್ದಾರೆ.
ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ.ಆದಿರದಲ್ಲಿ ಬುಧವಾರ ನಡೆದ ಸಂಯುಕ್ತ ಸ್ವಾತಂತ್ರö್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶ್ರೇಷ್ಠ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರು ತಮ್ಮ ಏಳನೇ ವಯಸ್ಸಿನಲ್ಲಿ ಕುದುರೆ ಸವಾರಿ, ಬಿಲ್ಲು ವರಸೆ, ಕತ್ತಿ ವರಸೆಯಲ್ಲಿ ನಿಪುಣೆ ಹೊಂದಿದ್ದವರು. ಚಿಕ್ಕಂದಿನಿಅದಲೇ ವೀರತ್ವವನ್ನು ಮೈಗೂಡಿಸಿಕೊಂಡಿದ್ದವರು. ಚೆನ್ನಮ್ಮ ಅವರ ಧೈರ್ಯ, ಶೌರ್ಯವೂ ವಿಶ್ವಕ್ಕೆ ಮಾದರಿಯಾಗಿದೆ. ಅವರ ಆದರ್ಶ ತತ್ವಗಳನ್ನು ಪಾಲಿಸೋಣ ಎಂದು ಕರೆ ಮಾಡಿ.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಸಿದ್ಧಲಿಂಗಪ್ಪ ಅವರು ವಿಶೇಷ ಉಪನ್ಯಾಸ ನೀಡಿ, ಕಿತ್ತೂರು ಸಂಸ್ಥಾನವು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರö್ಯದ ಕಹಳೆ ಮೊಳಗಿಸಿದ್ದು, ಇಲ್ಲಿನ ಮಣ್ಣು ವೀರ ಸೇನಾನಿಗಳ ರಕ್ತದಿಂದ ಪಾವಿತ್ರ್ಯಕ್ಕೆ ಹೋಗಿದೆ ಎಂದರು.
ಕಿತ್ತೂರು ರಾಣಿ ಚೆನ್ನಮ್ಮ ಅವರು 1778 ರ ಸೆಪ್ಟೆಂಬರ್ 14 ರಲ್ಲಿ ಜನಿಸಿದ್ದಾರೆ. 1824 ರ ಅಕ್ಡೋಬರ್ 23 ರಂದು ಬ್ರಿಟಿಷರ ವಿರುದ್ಧ ಹೋರಾಡಿ ವೈರಿಗಳನ್ನು ಮೆಟ್ಟಿನಿಂತು ವಿಜಯೋತ್ಸವ ಮೆರೆದ ಸಂಭ್ರಮದ ಕ್ಷಣವೇ ಈ ದಿನ ವೀರೋತ್ಸವದ ಸುದಿನವಾಗಿದೆ ಎಂದು ಪ್ರಕಟಿಸಿದರು.
ಇತಿಹಾಸದ ಧೃವತಾರೆ ಕಿತ್ತೂರು ರಾಣಿ ಚೆನ್ನಮ್ಮ ಅವರು ತನ್ನ ಸಾಮ್ರಾಜ್ಯದ ರಕ್ಷಣೆಗಾಗಿ ಸಮರ್ಪಣಾ ಮನೋಭಾವ ಹೊಂದಿದ್ದರು. ಅವರ ದೇಶಪ್ರೇಮ, ಆತ್ಮವಿಶ್ವಾಸ ಕುರಿತು ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕು ಎಂದು ವಿವರಿಸುತ್ತಾ, ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನ ಸ್ವಾರಸ್ಯವನ್ನು ವಿವರಿಸಿದರು.
ಇದೇ ವೇಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಗಣ್ಯರೆಲ್ಲರೂ ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಂಪ್ಲಿಯ ಶೈಲಾ ದೇವರಮನೆ ಅವರು ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿದರು.
ಸ್ವಾತಂತ್ರö್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆ ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರದೊಂದಿಗೆ ವಿವಿಧ ಕಲಾ ವಾದ್ಯಗಳ ಮೂಲಕ ನಗರದ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಆರಂಭಗೊಂಡು ಬಸವೇಶ್ವರ ಪುತ್ಥಳಿ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಿ.ನಾಗರಾಜ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಜಿ.ನೀಲಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ಡಿ.ಕೊಟ್ರಪ್ಪ, ವೀರಶೈವ ನಿವೃತ್ತ ಪಂಚಮಸಾಲಿ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಎನ್.ಎಂ.ರಾಜೇಶ್ವರಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗವೇಣಿ, ಬ್ರೂಸ್ಪೇಟೆ ಠಾಣೆಯ ಪಿಎಸ್ಐ ಸಿಂಧು.ಎ., ಪಾಲಿಕೆ ಸದಸ್ಯರಾದ ಸುರೇಖಾ ಮಲ್ಲನಗೌಡ, ಈರಮ್ಮ ಸುರೇಂದ್ರ ಸೇರಿದಂತೆ ಸಮಾಜದ ಪ್ರಮುಖರು, ಸಾರ್ವಜನಿಕರು ಹಾಗೂ ಸಮಾರಂಭ