ಹಾಸನ : ಜಿಲ್ಲೆಯ 38 ಪರೀಕ್ಷಾ ಕೇಂದ್ರಗಳಲ್ಲಿ ಅ.27 ರಂದು ತಾಲ್ಲೂಕಿನ 03 ಪರೀಕ್ಷಾ ಕೇಂದ್ರಗಳಲ್ಲಿ ಅ..26 ನಡೆಯುವ ಗ್ರಾಮ ಆಡಳಿತ ಅಧಿಕಾರಿ ಗ್ರೂಪ್ ಸಿ ವೃಂದದ ಒಟ್ಟು 1,000 ಹುದ್ದೆಗಳ ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿನ ಜೆರಾಕ್ಸ್/ಸೈಬರ್/ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚುವಂತೆ The Bharatiya Nagarik Suraksha Sanhita(BNSS) 2023 ಸೆಕ್ಷನ್ 163 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದಾರೆ.
ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ ಇತರರು ಯಾರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲವೆಂದು ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುತ್ತಾರೆ.