ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ ನಿಮಿತ್ಯ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರದಂದು ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಎನ್.ಅಂಜಿನಪ್ಪ, ಪಕ್ಷೇತರ ಅಭ್ಯರ್ಥಿಯಾಗಿ ಟಿ.ಎಂ.ಮಾರುತಿ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಂಗಾರಿ ಹನುಮಂತ ಅವರು ಮೂರು ನಾಮಪತ್ರ ಸೇರಿದಂತೆ ಒಟ್ಟು ಮೂವರು ಅಭ್ಯರ್ಥಿಗಳಿಂದ 5 ನಾಮಪತ್ರ ಸಲ್ಲಿಕೆಯಾಗಿವೆ.
ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ದಿನದಿಂದ ಇಲ್ಲಿಯವರೆಗೆ ಒಟ್ಟು ಏಳು ಅಭ್ಯರ್ಥಿಗಳು ಒಟ್ಟು 13 ನಾಮಪತ್ರ ಸಲ್ಲಿಸಿದ್ದಾರೆ.
ಅದರಲ್ಲಿ ಸ್ವತಂತ್ರ ಅಭ್ಯರ್ಥಿಗಳಾಗಿ ಎನ್.ವೆಂಕಣ್ಣ, ಟಿ.ರ‍್ರಿಸ್ವಾಮಿ, ಬಂಗಾರಿ ಅನಿಲ್ ಕುಮಾರ್, ಟಿ.ಎಂ.ಮಾರುತಿ ಇವರುಗಳು ಒಂದೊAದು ನಾಮಪತ್ರ ಸಲ್ಲಿಸಿದ್ದರೆ, ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ.ಅನ್ನಪೂರ್ಣ ಅವರು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಅದೇರೀತಿಯಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಂಗಾರಿ ಹನುಮಂತ ಅವರು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎನ್.ಅಂಜಿನಪ್ಪ ಅವರು ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಅ.28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.30 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ.