Breaking
Mon. Dec 23rd, 2024

ನೀಲೇಶ್ವರ ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಸಿಡಿಸಿದ ಘಟನೆಯಲ್ಲಿ 150 ಮಂದಿ ಗಾಯಗೊಂಡಿದ್ದು, 8 ಮಂದಿ ಗಂಭೀರ….!

ಕಾಸರಗೋಡು : ನೀಲೇಶ್ವರ ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಸಿಡಿಸಿದ ಘಟನೆಯಲ್ಲಿ 150 ಮಂದಿ ಗಾಯಗೊಂಡಿದ್ದು, 8 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ.

ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೀರರ್ಕಾವು ದೇವಸ್ಥಾನದ ಬಳಿಯ ಪಟಾಕಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈ ಅವಘಡ ಸಂಭವಿಸಿದೆ ಎಂದು ನಂಬಲಾಗಿದೆ.

ಮಂಗಳವಾರ ಮಧ್ಯಾಹ್ನ 12.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಪಟಾಕಿ ಸಿಡಿಸಲು ದೇವಸ್ಥಾನದ ಅಧಿಕಾರಿಗಳು ಅನುಮತಿ ಪಡೆದಿರಲಿಲ್ಲ. ಪೊಲೀಸರು ದೇವಸ್ಥಾನದ ನೌಕರರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪ್ರಾಥಮಿಕ ತನಿಖೆ ಆರಂಭವಾಗಿದೆ ಎಂದು ಕಾಸರಗೋಡು ಜಿಲ್ಲಾಧಿಕಾರಿ ಕೆ.ಇಂಬಾಶೇಖರ್ ತಿಳಿಸಿದ್ದಾರೆ.

ದೇವಸ್ಥಾನದ ಗೋಡೆಯ ಪಕ್ಕದ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿಗಳನ್ನು ಇಡಲಾಗಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಲ್ಲಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸ್ಫೋಟದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಕಟ್ಟಡಕ್ಕೆ ಬೆಂಕಿ ಕಾಣಿಸಿಕೊಂಡು ಆವರಿಸಿದೆ. ತೆಯ್ಯಂಗಳ ಪ್ರದರ್ಶನ ವೀಕ್ಷಿಸಲು ಬಂದಿದ್ದ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

Related Post

Leave a Reply

Your email address will not be published. Required fields are marked *