ಚಿತ್ರದುರ್ಗ : ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲಾಮಟ್ಟದ “ದೀಪ ಸಂಜೀವಿನಿ” ಕಾರ್ಯಕ್ರಮವನ್ನು ಇದೇ ಅ.29ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ವೃತ್ತದಲ್ಲಿ ಆಯೋಜಿಸಲಾಗಿದೆ.
ದೀಪಾವಳಿ ಹಬ್ಬದ ಅಂಗವಾಗಿ ಮಹಿಳೆಯರ ಸ್ವಾವಲಂಬಿ ನಡೆಗಳನ್ನು ಪ್ರೇರೇಪಿಸಲು ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ಮಣ್ಣಿನ ಹಣತೆಗಳು ಹಾಗೂ ಹಬ್ಬದ ವಿಶೇಷ ತಿಂಡಿ-ತಿನಿಸುಗಳ ಮಳಿಗೆಗಳನ್ನು ತೆರೆದು ದೀಪ ಸಂಜೀವಿನಿ ಕಾರ್ಯಕ್ರಮ ಆಯೋಜಿಸಲಾಗಿದೆ
ದೀಪಾವಳಿ ಹಬ್ಬವು ಪ್ರಸಿದ್ಧವಾದ ಹಬ್ಬವಾಗಿದ್ದು, ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬವೆ ಬೆಳಕಿನ ಹಬ್ಬ ದೀಪಾವಳಿ. ಈ ದೀಪಾವಳಿಯಲ್ಲಿ ನಮ್ಮ ಸ್ವ ಸಹಾಯ ಗುಂಪಿನ ಮಹಿಳೆಯರು ತಮ್ಮ ಕೈಚಳಕ, ಪರಿಶ್ರಮ ಹಾಗೂ ಸೃಜನಶೀಲತೆಯಿಂದ ತಯಾರಿಸಿದ ವಿವಿಧ ವಿನ್ಯಾಸದ ದೀಪಗಳನ್ನು ಬಳಸುವುದರ ಮೂಲಕ ಮಾರುಕಟ್ಟೆ ಒದಗಿಸುವುದು ಹಾಗೂ ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸುವುದರ ಮೂಲಕ ಮಹಿಳೆಯರ ಸ್ವಾವಲಂಬಿ ನಡೆಗಳನ್ನು ಪ್ರೇರೇಪಿಸುವುದಕ್ಕಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅ. 28 ರಿಂದ 31 ರವರೆಗೆ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸುವ ಮಣ್ಣಿನ ಹಣತೆಗಳು ಹಾಗೂ ಹಬ್ಬದ ವಿಶೇಷ ತಿಂಡಿ- ತಿನಿಸುಗಳ ಮಳಿಗೆಗಳನ್ನು ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.