Breaking
Mon. Dec 23rd, 2024

ಕನ್ನಡ ಭಾಷೆ ನಮ್ಮ ಭಾವನೆಯನ್ನು ವ್ಯಕ್ತಪಡಿಸುವ ಹೃದಯಸ್ಪರ್ಶಿ ಭಾಷೆಯಾಗಿದೆ ಎಂದು ತಾಸಿಲ್ದಾರ್ ಗಿರೀಶ್….!

ಶಿವಮೊಗ್ಗ : ಕನ್ನಡ ಭಾಷೆ ನಮ್ಮ ಭಾವನೆಯನ್ನು ವ್ಯಕ್ತಪಡಿಸುವ ಹೃದಯಸ್ಪರ್ಶಿ ಎಂದು ಶಿವಮೊಗ್ಗ ತಹಶೀಲ್ದಾರ್ ಗಿರೀಶ್ ಅವರು ಪ್ರಕಟಿಸಿದ್ದಾರೆ. 

 ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾನಪದ ಪರಿಷತ್ತು , ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ , ಕನ್ನಡಪರ ರೈತ ಕಾರ್ಮಿಕ ಸಂಘಟನೆ , ಎನ್‌ಎಸ್‌ಎಸ್‌, ಎನ್‌ಸಿಸಿ, ಸ್ಕೌಟ್‌ ಅಂಡ್‌ ಗೈಡ್‌, ರೋಟರಿ, ಲಯನ್ಸ್‌ ಕ್ಲಬ್‌, ರೆಡ್‌ ಕ್ರಾಸ್‌, ಸ್ತಿçÃಶಕ್ತಿ ಸಂಘ ಹಾಗೂ ಇತರ ಸಂಸ್ಥೆಗಳೊಂದಿಗೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ಕನ್ನಡದ ರಥಯಾತ್ರೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ವೇಳೆ ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಅವರು ಪುಪ್ಪನಮನ ಸಲ್ಲಿಸುವ ಮೂಲಕ ಸ್ವಾಗತಿಸಿದರು.

 ನಗರದ ಅಶೋಕ ವೃತ್ತ, ಶಿವಪ್ಪನಾಯಕ ವೃತ್ತ, ಗೋಪಿ ವೃತ್ತ, ಮಹಾವೀರ ವೃತ್ತದ ಮಾರ್ಗವಾಗಿ ಕುವೆಂಪು ರಂಗಮಂದಿರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ವಿವಿಧ ಕಲಾ ಮೇಳದೊಂದಿಗೆ ಅದ್ದೂರಿಯಾಗಿ ರಥಯಾತ್ರೆ ನಡೆಸಲಾಯಿತು.

 ಕುವೆಂಪು ರಂಗಮಧ್ಯದಲ್ಲಿ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಕನ್ನಡ ಭಾಷೆಯಲ್ಲಿ ಮಾತನಾಡಿದರೆ ಕೆಲವು ಶಾಲೆಗಳಲ್ಲಿ ದಂಡ ಹಾಕುತ್ತಾರೆ ಎಂಬ ಸುದ್ದಿಗಳನ್ನು ನಾವು ಕೇಳಿದ್ದೇವೆ. ಕನ್ನಡ ನಾಡಿನಲ್ಲಿ ಈ ಪರಿಸ್ಥಿತಿ ಇದೆ, ಇದು ಅತ್ಯಂತ ವಿಷಾದನೀಯ.ಈ ರೀತಿಯ ಘಟನೆಗಳು ನಡೆಯಬಾರದು. ಕನ್ನಡ ಭಾಷೆಯಲ್ಲಿ ನಮ್ಮ ಭಾವನೆತುಂಬಿದೆ. ಅನ್ಯಭಾಷೆಯ ಕಲಿಕೆ ನಮ್ಮ ಜೀವನಕ್ಕೆ ಅಗತ್ಯ ಆದರೆ ನಮ್ಮ ಮಾತೃ ಭಾಷೆಯನ್ನು ನಾವು ಎಂದಿಗೂ ಬಿಡಬಾರದು ಶಾಲೆಗಳಲ್ಲಿ ಹಾಗೂ ನಮ್ಮ ಉದ್ಯೋಗದ ಸ್ಥಳಗಳಲ್ಲಿ ಕನ್ನಡ ಭಾಷೆಯನ್ನು ನಾವು ಹೆಚ್ಚು ಮಾತನಾಡಬೇಕು.

 ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ ಮಂಜುನಾಥ್ ಮಾತನಾಡಿ, ಮಂಡ್ಯ ಜಿಲ್ಲೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 20,21, ಮತ್ತು ಡಿಸೆಂಬರ್ 22 ರಂದು ಅದರ ಅಂಗವಾಗಿ ಇಡೀ ರಾಜ್ಯಾದ್ಯಂತ ಕನ್ನಡ ಜ್ಯೋತಿ ಹೊತ್ತ ರಥ ಸಂಚಾರ ಮಾಡಿ ಕನ್ನಡಿಗರಲ್ಲಿ ಜಾಗೃತಿ ಮೂಡಿಸುತ್ತಿದೆ. ಕನ್ನಡವನ್ನು ಕಟ್ಟುವ ಕೆಲಸಕ್ಕೆ ಎಲ್ಲರೂ ಜೊತೆಯಾಗಬೇಕು. ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅರಿವು ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ಮಾಜಿ ಎಂಎಲ್ಸಿ ಆರ್ ಪ್ರಸನ್ನಕುಮಾರ್, ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು, ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ಶಾಲಾ ಕಾಲೇಜು ವಿದ್ಯಾರ್ಥಿಗಳು.

Related Post

Leave a Reply

Your email address will not be published. Required fields are marked *